ಬೆಂಗಳೂರು: ಬೆಸ್ಕಾಂ ಸ್ಮಾರ್ಟ್ ಮೀಟರ್ ಕಡ್ಡಾಯ ಪ್ರಶ್ನಿಸಿ ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆ ಹೈಕೋರ್ಟ್ ಏಕ ಸದಸ್ಯ ಪೀಠದಲ್ಲಿ ನಡೆದಿದೆ.
ವಿದ್ಯುತ್ ಸೋರಿಕೆ ತಡೆಗಟ್ಟಲು ಹೊಸ ಗ್ರಾಹಕರಿಗೆ ಸ್ಮಾರ್ಟ್ ಮೀಟರ್ ಗಳನ್ನು ಅಳವಡಿಸಲಾಗಿದೆ. ಪ್ರಿಪೇಯ್ಡ್, ಪೋಸ್ಟ್ ಪೇಡ್ ಆಯ್ಕೆಗಳನ್ನು ಕೂಡ ನೀಡಲಾಗಿದೆ.
ಕೇಂದ್ರ ಸರ್ಕಾರದ 900 ರೂಪಾಯಿ ಸಬ್ಸಿಡಿ ಪಡೆಯಲು ಸಾಧ್ಯವಿಲ್ಲ. ಎಸ್ಕಾಂಗಳು ಬಾಕಿ ಪಾವತಿಸಿದರೆ ಮಾತ್ರ ಕೇಂದ್ರ ಸರ್ಕಾರ ಸಬ್ಸಿಡಿ ನೀಡುತ್ತದೆ. ಆದರೆ ಜನರಿಗೆ ಉಚಿತ ವಿದ್ಯುತ್ ಗ್ಯಾರಂಟಿ ಕೊಟ್ಟಿರುವುದರಿಂದ ನಮ್ಮ ಬಳಿ ದುಡ್ಡಿಲ್ಲ. ಹೀಗಾಗಿ ಕೇಂದ್ರದ ಸ್ಮಾರ್ಟ್ ಮೀಟರ್ ಸಬ್ಸಿಡಿ ಪಡೆಯಲು ಸಾಧ್ಯವಿಲ್ಲ ಎಂದು ಬೆಸ್ಕಾಂ ಪರವಾಗಿ ಹಿರಿಯ ವಕೀಲರಾದ ಉದಯ ಹೊಳ್ಳ ವಾದ ಮಂಡಿಸಿದ್ದಾರೆ. ವಿಚಾರಣೆಯನ್ನು ಜುಲೈ 18ಕ್ಕೆ ಹೈಕೋರ್ಟ್ ಮುಂದೂಡಿದೆ.