ಇನ್ಮುಂದೆ ‘ಬಂದ್’ ಅವಶ್ಯಕತೆ ಇಲ್ಲ, ‘ಕೋರ್ಟ್’ ಕೂಡ ಅನುಮತಿ ನೀಡಲ್ಲ : ಡಿಸಿಎಂ ಡಿ.ಕೆ ಶಿವಕುಮಾರ್

ಬೆಂಗಳೂರು : ಇನ್ಮುಂದೆ ಬಂದ್ ಅವಶ್ಯಕತೆ ಇಲ್ಲ, ಕೋರ್ಟ್ ಕೂಡ ಅನುಮತಿ ನೀಡಲ್ಲ ಎಂದು ಡಿಸಿಎಂ ಡಿಕೆ ಶಿವಕುಮಾರ್ ಹೇಳಿದ್ದಾರೆ.

ಇಂದು ಸುದ್ದಿಗಾರರ ಜೊತೆ ಮಾತನಾಡಿದ ಡಿಸಿಎಂ ಡಿಕೆ ಶಿವಕುಮಾರ್ ತಮಿಳುನಾಡು 12 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ಕೇಳಿತ್ತು. ಆದರೆ, CWRC ತಮಿಳುನಾಡು ಮನವಿ ತಿರಸ್ಕರಿಸಿದ್ದು, ಬರೀ 3 ಸಾವಿರ ಕ್ಯೂಸೆಕ್ ನೀರು ಬಿಡಲು ಆದೇಶ ಹೊರಡಿಸಿದೆ ಎಂದರು. ಇದರಿಂದ ಸಂತಸವಾಗಿದೆ ಎಂದು ಬೆಂಗಳೂರಿನಲ್ಲಿ ಡಿ.ಕೆ.ಶಿವಕುಮಾರ್ ಹೇಳಿದರು.

ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿ ದಿನ ಮತ್ತೆ 3 ಸಾವಿರ ಕ್ಯೂಸೆಕ್ ನೀರು ಹರಿಸುವಂತೆ ದೆಹಲಿಯ ಕಾವೇರಿ ನೀರು ನಿಯಂತ್ರಣ ಸಮಿತಿ ಇಂದು ಕರ್ನಾಟಕಕ್ಕೆ ಸೂಚನೆ ನೀಡಿದೆ. CWRC ಆದೇಶ ಅವೈಜ್ಞಾನಿಕವಾಗಿದೆ ಎಂದು ರೈತರು, ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿ ಮತ್ತೆ ತಮ್ಮ ಪ್ರತಿಭಟನೆ ಮುಂದುವರೆಸಿದ್ದಾರೆ.

 

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read