
ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಉಂಟಾಗಿದೆ ಎಂಬ ಆರೋಪಕ್ಕೆ ಇಂಧನ ಸಚಿವ ಕೆ.ಜೆ ಜಾರ್ಜ್ ಪ್ರತಿಕ್ರಿಯೆ ನೀಡಿದ್ದಾರೆ.
ಗುರುವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು ರೈತರು ಬೇಡಿಕೆ ಇಟ್ಟಾಗಲೆಲ್ಲಾ ನಾವು ಅವರಿಗೆ ವಿದ್ಯುತ್ ಪೂರೈಕೆ ಮಾಡಿದ್ದೇವೆ. ನಿರ್ವಹಣೆಗಾಗಿ ರಾಜ್ಯದಲ್ಲಿ ಕೆಲವು ವಿದ್ಯುತ್ ಘಟಕಗಳನ್ನು ಮುಚ್ಚಲಾಗಿತ್ತು. ಆದ್ದರಿಂದ ಕೆಲಕಾಲ ಪವರ್ ಕಟ್ ಆಗಿತ್ತು. ಈಗ ಯಾವುದೇ ಸಮಸ್ಯೆ ಇಲ್ಲ. ಕರ್ನಾಟಕದಲ್ಲಿ ವಿದ್ಯುತ್ ಕೊರತೆ ಇಲ್ಲ. ವಿಪಕ್ಷಗಳು ಸುಖಾ ಸುಮ್ಮನೆ ಮಾತನಾಡುತ್ತಿದೆ. ಅನಾವಶ್ಯಕವಾಗಿ ರಾಜಕೀಯ ಮಾಡಲಾಗುತ್ತಿದೆ ಎಂದು ಇಂಧನ ಸಚಿವ ಕೆ.ಜೆ ಜಾರ್ಜ್ ಸ್ಪಷ್ಟನೆ ನೀಡಿದ್ದಾರೆ.

