HomeKarnatakaಪಿಯು ಉಪನಿರ್ದೇಶಕರ ಕಚೇರಿ ಆಡಳಿತ ಜಿಪಂ ಸಿಇಒಗೆ ವಹಿಸುವ ಪ್ರಸ್ತಾಪ ಇಲ್ಲ: ಸಚಿವರ ಸ್ಪಷ್ಟನೆ

ಪಿಯು ಉಪನಿರ್ದೇಶಕರ ಕಚೇರಿ ಆಡಳಿತ ಜಿಪಂ ಸಿಇಒಗೆ ವಹಿಸುವ ಪ್ರಸ್ತಾಪ ಇಲ್ಲ: ಸಚಿವರ ಸ್ಪಷ್ಟನೆ

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆ(ಪದವಿ ಪೂರ್ವ) ಜಿಲ್ಲಾ ಉಪ ನಿರ್ದೇಶಕರ ಕಚೇರಿ ಆಡಳಿತ ಮೇಲ್ವಿಚಾರಣೆಯನ್ನು ಜಿಲ್ಲಾ ಪಂಚಾಯಿತಿ ಸಿಇಒಗಳಿಗೆ ವಹಿಸುವ ಪ್ರಸ್ತಾಪ ಇಲ್ಲ ಎಂದು ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.

ವಿಧಾನ ಪರಿಷತ್ ನಲ್ಲಿ ಶೂನ್ಯ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಪುಟ್ಟಣ್ಣ ಪ್ರಸ್ತಾಪಿಸಿದ ವಿಷಯಕ್ಕೆ ಪ್ರತಿಕ್ರಿಯೆ ನೀಡಿದ ಸಚಿವರು, ಈ ಹಿಂದೆಯೇ ಡಿಡಿಪಿಯು ಕಚೇರಿಯನ್ನು ಜಿಲ್ಲಾ ಪಂಚಾಯತಿ ಸಿಇಒಗೆ ವಹಿಸುವ ಪ್ರಸ್ತಾಪನೆ ಇಲ್ಲ ಎಂದು ಸ್ಪಷ್ಟನೆ ನೀಡಿದ್ದರೂ ಶಿಕ್ಷಕರ ಸಂಘಗಳು ಬ್ಲಾಕ್ ಮೇಲ್ ಮಾಡುವುದು ಸರಿಯಲ್ಲ ಎಂದು ಹೇಳಿದ್ದಾರೆ.

ಈ ವಿಚಾರದ ಬಗ್ಗೆ ಪುಟ್ಟಣ್ಣ ಈ ಹಿಂದೆ ತಮ್ಮ ಗಮನಕ್ಕೆ ತಂದಾಗ ಜಾರಿಗೆ ತರುವುದಿಲ್ಲ ಎಂದು ಹೇಳಿದ್ದೆ. ಶಿಕ್ಷಕರ ಸಂಘಗಳಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಲಾಗಿತ್ತು. ಹೀಗಿದ್ದರೂ ಶಿಕ್ಷಕರ ಸಂಘ ಪ್ರಸ್ತಾಪ ಹಿಂಪಡೆಯದಿದ್ದರೆ ಮೌಲ್ಯಮಾಪನ ಬಹಿಷ್ಕರಿಸುವುದಾಗಿ ಹೇಳುವುದು ಬ್ಲಾಕ್ ಮೇಲ್ ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular