HomeKarnatakaವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಸೇವೆಗೆ ಯಾವುದೇ ನಿರ್ಬಂಧ ಇಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಸೇವೆಗೆ ಯಾವುದೇ ನಿರ್ಬಂಧ ಇಲ್ಲ: ಆರೋಗ್ಯ ಇಲಾಖೆ ಸ್ಪಷ್ಟನೆ

ಬೆಂಗಳೂರು: ಕರ್ನಾಟಕ ಕಡ್ಡಾಯ ವೈದ್ಯಕೀಯ ಕೋರ್ಸ್‌ಗಳನ್ನು ಪೂರ್ಣಗೊಳಿಸಿದ ಅಭ್ಯರ್ಥಿಗಳು ಕಾಯ್ದೆ, 2012 ರ ಅಡಿಯಲ್ಲಿ ಕಡ್ಡಾಯ ಸೇವೆಗೆ ಒಳಗಾಗಲು ಬಾಧ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ನೋಂದಣಿ ಮತ್ತು ಪದವಿ ಪ್ರಮಾಣಪತ್ರಗಳು ಹಾಗೂ ಕೋರ್ಸ್ ಪೂರ್ಣಗೊಳಿಸುವಿಕೆಯ ಪ್ರಮಾಣಪತ್ರಗಳನ್ನು ನೀಡುವುದು ಮತ್ತು ಮೂಲ ದಾಖಲೆಗಳನ್ನು ಹಿಂದಿರುಗಿಸುವ ಬಗ್ಗೆ ಸ್ಪಷ್ಟೀಕರಣ ನೀಡಲಾಗಿದೆ.

ಕರ್ನಾಟಕದಲ್ಲಿ ವೈದ್ಯಕೀಯ ಕೋರ್ಸ್ ಪೂರ್ಣಗೊಳಿಸಿದ ಅಭ್ಯರ್ಥಿಗಳಿಗೆ ಕಡ್ಡಾಯ ಸೇವೆಗೆ ಯಾವುದೇ ನಿರ್ಬಂಧವಿಲ್ಲ ಎಂದು ಆರೋಗ್ಯ ಇಲಾಖೆ ಸ್ಪಷ್ಟಪಡಿಸಿದೆ.

2012ರ ಕಾಯ್ದೆಯ ನಿಬಂಧನೆಗಳ ಅಡಿ ಕಡ್ಡಾಯ ಸೇವೆಗೆ ಒಳಗಾಗಲು ಬಾಧ್ಯತೆ ಹೊಂದಿರುವ ಅಭ್ಯರ್ಥಿಗಳಿಗೆ ಅಂತಿಮ ಪದವಿ ಪ್ರಮಾಣ ಪತ್ರ ನೀಡಲಾಗುವುದು ಎಂದು ಹೇಳಲಾಗಿದೆ. ಸ್ನಾತಕೋತ್ತರ ಪದವಿ ಪ್ರವೇಶ ಸಮಯದಲ್ಲಿ ಅಭ್ಯರ್ಥಿಗಳು ಕಾಲೇಜುಗಳಲ್ಲಿ ಠೇವಣಿ ಇಟ್ಟ ಮೂಲ ದಾಖಲೆ ಹಿಂತಿರುಗಿಸುವುದು, ಕರ್ನಾಟಕ ಕಡ್ಡಾಯ ಸೇವೆಯ ಕಾಯ್ದೆ 2012ರ ನಿಬಂಧನೆಗಳಿಗೆ ಸಂಬಂಧಿಸಿದ ಬದಲಿಗೆ ಈ ಕಾಯ್ದೆಯ ನಿಬಂಧನೆಗಳ ಅಡಿ ಕಡ್ಡಾಯ ಸೇವೆಗೆ ಒಳಗಾಗಲು ಅರ್ಹ ಅಭ್ಯರ್ಥಿಗಳಿಗೆ ಷರತ್ತುಬದ್ಧ ನೋಂದಣಿ ನೀಡುವ ಬಗ್ಗೆ ಕಾಯ್ದೆಯಡಿ ತಮ್ಮ ಕರ್ತವ್ಯವನ್ನು ಇನ್ನೂ ನಿರ್ವಹಿಸದ ಅಭ್ಯರ್ಥಿಗಳಿಗೆ ರೋಗಿಗಳಿಗೆ ಸ್ವತಂತ್ರವಾಗಿ ಚಿಕಿತ್ಸೆ ನೀಡಲು ಮತ್ತು ಔಷಧ ಶಿಫಾರಸು ಮಾಡಲು ಅಂತಹ ಸೇವೆ ಪೂರ್ಣಗೊಳಿಸುವವರೆಗೆ ಷರತ್ತುಬದ್ಧ ತಾತ್ಕಾಲಿಕ ನೊಂದಣಿ ನೀಡಬಹುದಾಗಿದೆ ಎಂದು ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular