‘ಅನ್ನಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ’ : ಸಚಿವ ಮಹದೇವಪ್ಪ ಕಿಡಿ

ಬೆಂಗಳೂರು : ಅನ್ನ ಭಾಗ್ಯಕ್ಕೆ ಅಕ್ಕಿ ಇಲ್ಲ, ಧರ್ಮದ ಹೆಸರಲ್ಲಿ ಮನೆ ಮನೆಗೆ ಅಕ್ಷತೆ ಕೊಡ್ತಿದ್ದಾರೆ ಎಂದು ಕೇಂದ್ರದ ವಿರುದ್ಧ ಸಚಿವ ಹೆಚ್.ಸಿ ಮಹದೇವಪ್ಪ ಕಿಡಿಕಾರಿದ್ದಾರೆ.

ಈ ಬಗ್ಗೆ ಪೋಸ್ಟ್ ಮಾಡಿದ ಸಚಿವರು ಹಸಿವು ಮುಕ್ತ ಕರ್ನಾಟಕದ ಉದ್ದೇಶದಿಂದ ಜಾರಿಗೊಳಿಸಿದ್ದ ಅನ್ನಭಾಗ್ಯ ಯೋಜನೆಗೆ ಹೆಚ್ಚಿನ ಹಣ ನೀಡಿ ಕೊಂಡುಕೊಳ್ಳುತ್ತೇವೆ ಎಂದಾಗಲೂ ಕೇಂದ್ರದಿಂದ ಅಕ್ಕಿ ನೀಡದವರು ಈ ದಿನ ಧರ್ಮದ ಹೆಸರಲ್ಲಿ ಅಕ್ಷತೆಯ ಗಂಟನ್ನು ಮನೆ ಮನೆಗೆ ಕಳಿಸುತ್ತಿರುವುದು ನೈಜ ಧರ್ಮದ ಕಲ್ಪನೆಗೆ ವಿರುದ್ಧವಾಗಿದೆ ಬಡವರ ಹಸಿವಿಗೆ ಅನ್ನ ನೀಡುವುದಕ್ಕಿಂತಲೂ ದೊಡ್ಡ ಧರ್ಮ ಇದೆಯೇ? ಎಂದು ಪ್ರಶ್ನಿಸಿದ್ದಾರೆ.

ಬಡವರ ಹಸಿವಿಗೆ ನೀಡುವ ಅನ್ನದ ವಿಷಯದಲ್ಲೂ ರಾಜಕೀಯ ಮಾಡುವಂತಹ ಅಮಾನವೀಯ ಪ್ರವೃತ್ತಿ ತೋರಿದ ಇವರು ಧರ್ಮದ ಕುರಿತಂತೆ ಮಾತನಾಡುತ್ತಿದ್ದರೆ ಅದನ್ನು ಕಂಡು ನಗಬೇಕೋ ಅಳಬೇಕೋ ಎಂದು ನನಗೆ ತಿಳಿಯುತ್ತಿಲ್ಲ! ಎಂದು ಕಿಡಿಕಾರಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read