BIG NEWS : ರಾಜ್ಯ ಸರ್ಕಾರದ ‘ಗ್ಯಾರಂಟಿ ಯೋಜನೆ’ಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ : CM ಸಿದ್ದರಾಮಯ್ಯ ಸ್ಪಷ್ಟನೆ

ವಿಜಯಪುರ : ಕೊಪ್ಪಳದ ಬಲ್ಡೋಟ ಉಕ್ಕು ಕಾರ್ಖಾನೆಯ ಬಗ್ಗೆ ವಿಸ್ತೃತ ವರದಿ ನೀಡುವಂತೆ ಕೊಪ್ಪಳ ಜಿಲ್ಲಾಧಿಕಾರಿಗಳಿಗೆ ಸೂಚಿಸಲಾಗಿದ್ದು, ವರದಿ ಪರಿಶೀಲಿಸಿದ ನಂತರ ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ನಮ್ಮ ಸರ್ಕಾರದ ಗ್ಯಾರಂಟಿ ಯೋಜನೆಗಳಿಗೆ ಯಾವುದೇ ರೀತಿಯ ಹಣದ ಕೊರತೆಯಿಲ್ಲ. ಕಳೆದ ವರ್ಷದಂತೆ ಈ ಸಾಲಿನ ಬಜೆಟ್ ನಲ್ಲಿಯೂ ಗ್ಯಾರಂಟಿಗಳಿಗೆ ಹಣ ಮೀಸಲಿರಿಸಲಾಗಿದೆ. ಸರ್ಕಾರ ಎರಡು ವರ್ಷ ಪೂರೈಸಿದ ಸಂದರ್ಭದಲ್ಲಿ ಸಾಧನಾ ಸಮಾವೇಶವನ್ನು ವಿಜಯನಗರದ ಹೊಸಪೇಟೆಯಲ್ಲಿ ಮೇ 20 ರಂದು ಆಯೋಜಿಸಿದ್ದು, ಕಾರ್ಯಕ್ರಮಕ್ಕೆ ಸುಮಾರು ಮೂರು ಲಕ್ಷ ಜನ ಆಗಮಿಸುವ ಸಾಧ್ಯತೆಯಿದೆ.

ಬೆಂಗಳೂರು ಬೃಹತ್ ಆಗಿ ಬೆಳೆದಿದ್ದು, ವಿಭಾಗಗಳನ್ನು ರಚಿಸಬೇಕೆಂದು ಬಿಜೆಪಿ ಸರ್ಕಾರದ ನಗರಾಭಿವೃದ್ಧಿ ಸಚಿವರಾಗಿದ್ದ ಸುರೇಶ್ ಕುಮಾರ್ ಅವರು ಯೋಜಿಸಿದ್ದರು. ಬೆಂಗಳೂರಿನಲ್ಲಿ ಒಂದೂವರೆ ಕೋಟಿ ಜನ ನೆಲೆಸಿದ್ದು, ಈ ನಗರದ ಆಡಳಿತವನ್ನು ಒಂದು ಮಹಾನಗರ ಪಾಲಿಕೆ ನಿರ್ವಹಿಸುವುದು ಕಷ್ಟಸಾಧ್ಯ. ಆದ್ದರಿಂದ ಆಡಳಿತಾತ್ಮಕ ದೃಷ್ಟಿಯಿಂದ ಬೆಂಗಳೂರು ಮಹಾನಗರಕ್ಕೆ ಮೂರು ಅಥವಾ ಹೆಚ್ಚು ಮಹಾನಗರ ಪಾಲಿಕೆಗಳನ್ನು ರಚಿಸಬೇಕೆಂಬ ಚಿಂತನೆಯಿಂದ ಮೊದಲ ಬಾರಿ ಮುಖ್ಯಮಂತ್ರಿಯಾಗಿದ್ದಾಗ ಬಿ.ಎಸ್.ಪಾಟೀಲ್, ಸಿದ್ದಯ್ಯ ಅವರನ್ನೊಳಗೊಂಡ ಸಮಿತಿಯನ್ನು ರಚಿಸಲಾಗಿತ್ತು. ಆದ್ದರಿಂದ ನಮ್ಮ ಸರ್ಕಾರ ಮತ್ತೆ ಅಧಿಕಾರಕ್ಕೆ ಬಂದಿರುವುದರಿಂದ, ಈ ಚಿಂತನೆಯನ್ನು ಕಾರ್ಯರೂಪಕ್ಕೆ ತರುತ್ತಿದೆ. ಎಂದರು.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read