ನವದೆಹಲಿ : ಮಹಾರಾಷ್ಟ್ರ ವಿಧಾನಸಭೆ ಚುನಾವಣೆಯಲ್ಲಿ ಮ್ಯಾಚ್ ಫಿಕ್ಸಿಂಗ್ ನಡೆದಿತ್ತು ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಗಂಭೀರ ಆರೋಪ ಮಾಡಿದ್ದಾರೆ.
ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಶನಿವಾರ ತೀವ್ರ ವಾಗ್ದಾಳಿ ನಡೆಸಿ, ಕಳೆದ ವರ್ಷ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಅನುಕೂಲವಾಗುವಂತೆ ಅಕ್ರಮ ನಡೆದಿದೆ ಎಂದು ಆರೋಪಿಸಿದ್ದಾರೆ.2024 ರಲ್ಲಿ ನಡೆದ ಮಹಾರಾಷ್ಟ್ರ ವಿಧಾನಸಭಾ ಚುನಾವಣೆಗಳು ಪ್ರಜಾಪ್ರಭುತ್ವವನ್ನು ಮೋಸಗೊಳಿಸುವ ನೀಲನಕ್ಷೆಯಾಗಿತ್ತು ಎಂದಿದ್ದಾರೆ.
How to steal an election?
— Rahul Gandhi (@RahulGandhi) June 7, 2025
Maharashtra assembly elections in 2024 were a blueprint for rigging democracy.
My article shows how this happened, step by step:
Step 1: Rig the panel for appointing the Election Commission
Step 2: Add fake voters to the roll
Step 3: Inflate voter… pic.twitter.com/ntCwtPVXTu
ಪೋಸ್ಟ್ ಮಾಡಿದ ರಾಹುಲ್ ಗಾಂಧಿ, ವಿಧಾನಸಭಾ ಚುನಾವಣಾ ಫಲಿತಾಂಶಗಳಲ್ಲಿ ಅಕ್ರಮ ನಡೆದಿದೆ ಎಂದು ತಾವು ಹೇಗೆ ನಂಬುತ್ತಾರೆ ಎಂಬುದರ ಕುರಿತು ಹಂತ ಹಂತವಾಗಿ ವಿವರಣೆಯನ್ನು ನೀಡಿದರು,ಮಹಾರಾಷ್ಟ್ರದಲ್ಲಿ ಬಿಜೆಪಿ ಏಕೆ ಇಷ್ಟೊಂದು ಹತಾಶವಾಗಿತ್ತು ಎಂಬುದನ್ನು ಅರ್ಥಮಾಡಿಕೊಳ್ಳುವುದು ಕಷ್ಟವೇನಲ್ಲ. ಆದರೆ ರಿಗ್ಗಿಂಗ್ ಮ್ಯಾಚ್ ಫಿಕ್ಸಿಂಗ್ನಂತಿದೆ – ಮೋಸ ಮಾಡುವ ಪಕ್ಷವು ಪಂದ್ಯವನ್ನು ಗೆಲ್ಲಬಹುದು, ಆದರೆ ಸಂಸ್ಥೆಗಳಿಗೆ ಹಾನಿ ಮಾಡುತ್ತದೆ ಮತ್ತು ಫಲಿತಾಂಶದ ಮೇಲಿನ ಸಾರ್ವಜನಿಕ ನಂಬಿಕೆಯನ್ನು ನಾಶಪಡಿಸುತ್ತದೆ. ಎಲ್ಲಾ ಕಾಳಜಿಯುಳ್ಳ ಭಾರತೀಯರು ಪುರಾವೆಗಳನ್ನು ನೋಡಬೇಕು. ಮ್ಯಾಚ್ ಫಿಕ್ಸಿಂಗ್ ಚುನಾವಣೆಗಳು ಪ್ರಜಾಪ್ರಭುತ್ವಕ್ಕೆ ವಿಷ ಎಂದಿದ್ದಾರೆ.