ಬೆಂಗಳೂರು: ಹಿರಿಯೂರು ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ನಾನು ಸ್ಪರ್ಧೆ ಮಾಡುವುದಿಲ್ಲ ಎಂದು ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಸ್ಪಷ್ಟಪಡಿಸಿದ್ದಾರೆ.
ಬೆಂಗಳೂರಿನ ಜೆಪಿ ಭವನದಲ್ಲಿ ಮಾತನಾಡಿದ ಅವರು, ಹಿರಿಯೂರು ಕ್ಷೇತ್ರದ ಉಪ ಚುನಾವಣೆಯಲ್ಲಿ ಜೆಡಿಎಸ್ ಸ್ಪರ್ಧಿಸಬೇಕು ಎಂದಿದೆ. ಆದರೆ, ನಾನು ಉಪ ಚುನಾವಣೆಯಲ್ಲಿ ಸ್ಪರ್ಧಿಸುವುದಿಲ್ಲ. ಉಪ ಚುನಾವಣೆಗೆ ನಿಲ್ಲುವುದೇ ನನ್ನ ಕೆಲಸವಲ್ಲ, ಈಗ ಕೇಂದ್ರದಲ್ಲಿ ಸಚಿವನಾಗಿದ್ದೇನೆ. ಅಲ್ಲಿ ಕೆಲಸ ಮಾಡಿಕೊಂಡು ಹೋಗುತ್ತೇನೆ ಎಂದು ಹೇಳಿದ್ದಾರೆ.
ನಾವು ಮತ್ತು ಬಿಜೆಪಿಯವರು ಒಟ್ಟಾಗಿ ಹೋಗುತ್ತೇವೆ. ಈಗ ಕೇಂದ್ರ ಸಚಿವನಾಗಿ ಇದ್ದೇನೆ. ಕೇಂದ್ರದಲ್ಲಿ ಪ್ರಧಾನಿ ಮೋದಿ ಅವರು ಜವಾಬ್ದಾರಿ ನೀಡಿದ್ದಾರೆ. ಇನ್ನು ಮೂರು ವರ್ಷ ಇದೆ. ಮೂರು ವರ್ಷ ಕೇಂದ್ರದಲ್ಲಿ ಕೆಲಸ ಮಾಡುತ್ತೇನೆ. ಜೊತೆಗೆ ರಾಜ್ಯದಲ್ಲಿಯೂ ಪಕ್ಷ ಸಂಘಟಿಸುತ್ತೇನೆ ಎಂದು ಹೇಳಿದ್ದಾರೆ.

