HomeKarnatakaಬೆಂಗಳೂರಲ್ಲಿ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ 'ರೋಡ್ ಶೋ' ಇರಲ್ಲ: ಪೊಲೀಸ್ ಆಯುಕ್ತ ಬಿ. ದಯಾನಂದ್...

ಬೆಂಗಳೂರಲ್ಲಿ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ‘ರೋಡ್ ಶೋ’ ಇರಲ್ಲ: ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ

ಬೆಂಗಳೂರು : ನಾಳೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮಿಸಿ ಇಸ್ರೋ ವಿಜ್ಞಾನಿಗಳನ್ನು ಅಭಿನಂದಿಸಲಿದ್ದಾರೆ. ಆದರೆ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ಪೊಲೀಸ್ ಆಯುಕ್ತ ಬಿ. ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

ಈ ಬಗ್ಗೆ ಸುದ್ದಿಗಾರರ ಜೊತೆ ಮಾತನಾಡಿದ ಅವರು ನಾಳೆ ಪ್ರಧಾನಿ ನರೇಂದ್ರ ಮೋದಿ ಬೆಂಗಳೂರಿಗೆ ಆಗಮಿಸಲಿದ್ದಾರೆ, ಆದರೆ ವಿಚಾರವಾಗಿ ಅಧಿಕೃತವಾಗಿ ಮೋದಿ ರೋಡ್ ಶೋ ಇರಲ್ಲ. ಕೆಲ ಸ್ಥಳಗಳಲ್ಲಿ ಜನರು ಜಮಾಯಿಸುವ ಸಾಧ್ಯತೆ ಬಗ್ಗೆ ಮಾಹಿತಿ ಇದೆ. ಆದರೆ ನಾಳೆ ಅಧಿಕೃತವಾಗಿ ಪ್ರಧಾನಿ ಮೋದಿ ರೋಡ್ ಶೋ ಇರಲ್ಲ ಎಂದು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಸ್ಪಷ್ಟನೆ ನೀಡಿದ್ದಾರೆ.

ಭಾರತ ಚಂದ್ರಯಾನ – 3 ರ ಅಭೂತಪೂರ್ವ ಯಶಸ್ಸು ಸಾಧಿಸಿದ್ದು, ಭಾರತ ಮಾತ್ರವಲ್ಲದೆ ವಿಶ್ವದ ಮೂಲೆ ಮೂಲೆಗಳಿಂದ ಅಭಿನಂದನೆಗಳ ಸುರಿಮಳೆಯೇ ಹರಿದು ಬಂದಿದೆ. ಭಾರತದ ಇಸ್ರೋ ವಿಜ್ಞಾನಿಗಳು ಬಾಹ್ಯಾಕಾಶ ಕ್ಷೇತ್ರದಲ್ಲಿ ತಮ್ಮ ಛಾಪು ಮೂಡಿಸಿದ್ದು, ಇಡೀ ವಿಶ್ವವೇ ಈಗ ಭಾರತದತ್ತ ಬೆರಗುಗಣ್ಣಿನಿಂದ ನೋಡುತ್ತಿದೆ.ಈ ಹಿನ್ನೆಲೆ ವಿಜ್ಞಾನಿಗಳನ್ನು ಅಭಿನಂದಿಸಲು ಪ್ರಧಾನಿ ಮೋದಿ ನಾಳೆ ಬೆಂಗಳೂರಿಗೆ ಬರುತ್ತಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಸಿದ್ಧತೆ ನಡೆಸಿದ್ದು, ಸ್ವಾಗತಕ್ಕೆ ಎಚ್ಎಎಲ್ ಏರ್ಪೋರ್ಟ್ನಲ್ಲಿ 5-6 ಸಾವಿರ ಜನರನ್ನು ಸೇರಿಸಲು ಉದ್ದೇಶಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

 

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular