BIG NEWS : ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಹೆಸರು ಸೇರಿಸಲು ಈ ದಾಖಲೆಗಳು ಕಡ್ಡಾಯ

ಭಾರತ ಚುನಾವಣಾ ಆಯೋಗದ ನಿರ್ದೇಶನದಂತೆ ಕರ್ನಾಟಕ ಈಶಾನ್ಯ ಶಿಕ್ಷಕರ ಕ್ಷೇತ್ರದ ಮತದಾರರ ಪಟ್ಟಿಯನ್ನು ಹೊಸದಾಗಿ ಸಿದ್ಧಪಡಿಸಬೇಕಾಗಿರುವುದರಿಂದ ಅರ್ಹ ಶಿಕ್ಷಕರಿಂದ ನೋಂದಾಯಿಸಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಹರು ಹೆಚ್ಚಿನ ಆಸಕ್ತಿ ವಹಿಸಿ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರನ್ನು ನೋಂದಾಯಿಸಿ ಸುಭದ್ರ ಹಾಗೂ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಬಲಪಡಿಸುವಲ್ಲಿ ಸಕ್ರೀಯವಾಗಿ ಪಾಲ್ಗೊಳ್ಳಬೇಕು ಎಂದು ಪ್ರಕಟಣೆ ಹೊರಡಿಸಲಾಗಿದೆ.
ಪದವೀಧರ ಕ್ಷೇತ್ರದ ಮತದಾರರ ಪಟ್ಟಿಗೆ ಸೇರ್ಪಡೆ ಆಗಲು ಈ ಕೆಳಗಿನ ದಾಖಲೆಗಳು ಅವಶ್ಯಕ.

1- ಆಧಾರ್ ಕಾರ್ಡ್
2-ವೋಟರ್ ಐಡಿ
3-ಎಸ್ ಎಸ್ ಎಲ್ ಸಿ ಅಂಕಪಟ್ಟಿ
4-ಪದವಿ ಪ್ರಮಾಣ ಪತ್ರದ ನಕಲು ಜೊತೆಗೆ
5-ಒಂದು ಪಾಸ್ಪೋರ್ಟ್ ಸೈಜ್ ಫೋಟೋವನ್ನು ಅರ್ಜಿ ಜೊತೆ ಲಗತ್ತಿಸಬೇಕು
6- ಮತದಾರರು ತಮ್ಮ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 6.11.2025
ಇನ್ನು ಹೆಚ್ಚಿನ ಮಾಹಿತಿಗೆ ನಿಮ್ಮ ತಾಲೂಕು ಕಚೇರಿ ಅಥವಾ ತಾಲೂಕು ಕಚೇರಿಯ ಚುನಾವಣಾ ಶಾಖೆಯನ್ನು ಸಂಪರ್ಕಿಸಿ..

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read