HomeHealthಮಲಬದ್ಧತೆಗೆ ಕಾರಣ ಇಂಥಾ ಆಹಾರ....!

ಮಲಬದ್ಧತೆಗೆ ಕಾರಣ ಇಂಥಾ ಆಹಾರ….!

ಇತ್ತೀಚಿನ ದಿನಗಳಲ್ಲಿ ಚಿಕ್ಕ ಮಕ್ಕಳಿಂದ ಹಿಡಿದು ದೊಡ್ಡವರು ಕೂಡ ಮಲಬದ್ಧತೆ ಸಮಸ್ಯೆಯಿಂದ ಬಳಲುತ್ತಿರುತ್ತಾರೆ.

ಈ ಸಮಸ್ಯೆಯನ್ನು ನಿರ್ಲಕ್ಷಿಸಿದರೆ ಜೀರ್ಣಾಂಗ ವ್ಯವಸ್ಥೆಯಲ್ಲಿ ಸಮಸ್ಯೆ ಉಂಟಾಗುವುದು. ಹಾಗಾಗಿ ಆರಂಭದಲ್ಲಿಯೇ ಈ ಸಮಸ್ಯೆಯನ್ನು ನಿವಾರಿಸಿಕೊಳ್ಳಿ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದಕ್ಕಾಗಿ ಮಲಬದ್ಧತೆಗೆ ಕಾರಣವಾಗುವ ಈ ಆಹಾರದಿಂದ ದೂರವಿರಿ.

*ಆಲ್ಕೋಹಾಲ್ ಸೇವನೆ ಮಲಬದ್ಧತೆಗೆ ಕಾರಣವಾಗುತ್ತದೆ. ಅತಿಯಾಗಿ ಆಲ್ಕೋಹಾಲ್ ಸೇವಿಸುವುದರಿಂದ ನಿರ್ಜಲೀಕರಣ ಸಮಸ್ಯೆ ಉಂಟಾಗಿ ಮಲಬದ್ಧತೆ ಸಮಸ್ಯೆಗೆ ಕಾರಣವಾಗುತ್ತದೆ. ಹಾಗಾಗಿ ಆಲ್ಕೋಹಾಲ್ ತ್ಯಜಿಸಿ.

*ಸಂಸ್ಕರಿಸಿದ ಧಾನ್ಯಗಳು ಮತ್ತು ಅವುಗಳ ಉತ್ಪನ್ನಗಳಾದ ಬಿಳಿ ಅಕ್ಕಿ, ಪಾಸ್ಟಾ, ಬಿಳಿ ಬ್ರೆಡ್ ಮಲಬದ್ಧತೆಗೆ ಕಾರಣವಾಗುತ್ತದೆ. ಇವುಗಳಲ್ಲಿ ಕಡಿಮೆ ಫೈಬರ್ ಅಂಶವಿದೆ. ಹಾಗಾಗಿ ಇವುಗಳನ್ನು ಹೆಚ್ಚು ಸೇವಿಸಬೇಡಿ.

*ಡೈರಿ ಉತ್ಪನ್ನಗಳಾದ ಹಾಲು, ಮೊಸರು, ಬೆಣ್ಣೆ, ಮುಂತಾದವುಗಳನ್ನು ಹೆಚ್ಚಾಗಿ ಸೇವಿಸಿದರೆ ಮಲಬದ್ಧತೆ ಸಮಸ್ಯೆ ಕಾಡುತ್ತದೆ.

*ಕೆಂಪು ಮಾಂಸದಲ್ಲಿ ಅಧಿಕ ಕೊಬ್ಬು ಮತ್ತು ಫೈಬರ್ ಕಡಮೆ ಇರುತ್ತದೆ. ಇದು ಮಲಬದ್ಧತೆ ಸಮಸ್ಯೆಗೆ ಕಾರಣವಾಗುತ್ತದೆ.

*ಅಂಟು ಅಂಟಾದ ಆಹಾರಗಳನ್ನು ಹೆಚ್ಚು ಸೇವಿಸಬೇಡಿ. ಇದು ಮಲಬದ್ಧತೆ ಸಮಸ್ಯೆಯನ್ನುಂಟು ಮಾಡುತ್ತದೆ.

*ಕರಿದ ಆಹಾರದಲ್ಲಿ ಫೈಬರ್ ಅಂಶ ಕಡಿಮೆ ಇರುತ್ತದೆ. ಹಾಗಾಗಿ ಕರಿದ ಆಹಾರಗಳಿಂದ ದೂರವಿರಿ.

For Latest News Updates, Join Our Whatsapp Community🚩
RELATED ARTICLES

Most Popular