ಪ್ರಯಾಣಿಕರ ಸುರಕ್ಷತಾ ಮಾನದಂಡಗಳನ್ನು ಪಾಲಿಸಿದರೆ ಮಾತ್ರ ಖಾಸಗಿ ಹವಾನಿಯಂತ್ರಿತ ಸ್ಲೀಪರ್ ಕೋಚ್ ಹಾಗೂ ಪ್ರವಾಸಿ ಬಸ್‌ಗಳಿಗೆ ವಾಹನ ಸಾಮರ್ಥ್ಯ ಪ್ರಮಾಣ ಪತ್ರ ನೀಡಲಾಗುವುದು.
ರಾಜ್ಯದಲ್ಲಿ ಸಂಭವಿಸಿರುವ ಸ್ಲೀಪರ್ ಕೋಚ್ ಬಸ್‌ಗಳ ಅಗ್ನಿ ಅವಘಡಗಳ ಹಿನ್ನೆಲೆಯಲ್ಲಿ ಪ್ರಯಾಣಿಕರ ಸುರಕ್ಷತೆಯನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಾರಿಗೆ ಸಚಿವರಾದ ರಾಮಲಿಂಗಾರೆಡ್ಡಿ ಅವರು ತಿಳಿಸಿದ್ದಾರೆ.
ಸಾರಿಗೆ ಇಲಾಖೆಗೆ ಖಾಸಗಿ ಬಸ್‌ಗಳಿಗೆ ಸುರಕ್ಷತಾ ಮಾನದಂಡಗಳು
ಚಾಲಕನ ಆಸನದ ಹಿಂಭಾಗದಲ್ಲಿ ತುರ್ತು ನಿರ್ಗಮನ ದ್ವಾರದ ವ್ಯವಸ್ಥೆ ಇರಬೇಕು
ಸ್ವೀಪರ್ ಬರ್ತ್ ಗಳಲ್ಲಿ ‘ಸೈಡರ್ ಓಪನ್’ ಕಡ್ಡಾಯ
ಒಂದು ತಿಂಗಳೊಳಗೆ ಅಗ್ನಿ ಪತ್ತೆ ವ್ಯವಸ್ಥೆ ಅಳವಡಿಸಿಕೊಳ್ಳಬೇಕು
ಕನಿಷ್ಠ 10 ಕೆ.ಜಿ. ತೂಕದ ಅಗ್ನಿಶಾಮಕ ಉಪಕರಣಗಳನ್ನು ಬಸ್ ನಲ್ಲಿ ಇರಿಸಬೇಕು
ಬಸ್ ಕವಚ ನಿರ್ಮಾಣ ಸಂಸ್ಥೆಯ ಮಾನ್ಯತೆ ಪರಿಶೀಲನೆ ನಂತರವೇ ನೋಂದಣಿ ಪ್ರಕ್ರಿಯೆ
ಚಾಸಿಸ್ ಗೆ ಅನಧಿಕೃತ ವಿಸ್ತರಣೆ ಮಾಡಲು ನಿರ್ಬಂಧ
ಅನುಮೋದಿತ ಪರೀಕ್ಷಾ ಸಂಸ್ಥೆಯಿಂದ ಪ್ರಮಾಣ ಪತ್ರ ಪಡೆಯುವುದು ಕಡ್ಡಾಯ

