HomeEntertainmentನಾಳೆ ಬಿಡುಗಡೆಯಾಗಲಿವೆ ಈ ಮೂರು ಸಿನಿಮಾಗಳು

ನಾಳೆ ಬಿಡುಗಡೆಯಾಗಲಿವೆ ಈ ಮೂರು ಸಿನಿಮಾಗಳು

ಚಿರಂಜೀವಿ ಸರ್ಜಾ ಅಭಿನಯದ ‘ರಾಜ ಮಾರ್ತಾಂಡ’ ಸೇರಿದಂತೆ ವಿನೋದ್ ಪ್ರಭಾಕರ್ ಅವರ ಫೈಟರ್ ಮತ್ತು ‘ಲವ್’ ಸಿನಿಮಾ ನಾಳೆ ರಾಜ್ಯದ್ಯಂತ ತೆರೆ ಕಾಣುತ್ತಿದೆ. ಈಗಾಗಲೇ ಈ ಮೂರು ಚಿತ್ರಗಳು ಸದ್ಯ ಸ್ಯಾಂಡಲ್ ವುಡ್ ನಲ್ಲಿ ಸಾಕಷ್ಟು ಕುತೂಹಲ ಮೂಡಿಸಿವೆ.

ಚಿರಂಜೀವಿ ಸರ್ಜಾ ನಟನೆಯ ‘ರಾಜ ಮಾರ್ತಾಂಡ’ ಚಿತ್ರ ಬಾಕ್ಸ್ ಆಫೀಸ್ನಲ್ಲಿ ಧೂಳ್ ಎಬ್ಬಿಸಲು ಸಜ್ಜಾಗಿದೆ. ಅವರ ಸಹೋದರ ಧ್ರುವ ಸರ್ಜಾ ಧ್ವನಿ ನೀಡಿದ್ದು ಕೆ ರಾಮನಾರಾಯಣ್ ನಿರ್ದೇಶನ ಮಾಡಿದ್ದಾರೆ. ಶ್ರೀ ಮಹದೇಶ್ವರ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿವೇದಿತಾ, ಪ್ರಣವ್ ಗೌಡ, ಮತ್ತು ಶಿವಕುಮಾರ್ ಬಂಡವಾಳ ಹೂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆಕ್ಷನ್ ಸಿನಿಮಾಗಳ ಮೂಲಕ ಅಭಿಮಾನಿಗಳ ದಂಡೆ ಹೊಂದಿರುವ ಮರಿ ಟೈಗರ್ ವಿನೋದ್ ಪ್ರಭಾಕರ್ ಅವರ ‘ಫೈಟರ್’ ಕೂಡ ನಾಳೆ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದ್ದು, ಸಿನಿ ಪ್ರೇಕ್ಷಕರು ಕಾತರದಿಂದ ಕಾಯುತ್ತಿದ್ದಾರೆ. ನೂತನ್ ಉಮೇಶ್ ಆಕ್ಷನ್ ಕಟ್ ಹೇಳಿರುವ ಈ ಚಿತ್ರವನ್ನು ಕೆ ಸೋಮಶೇಖರ್ ನಿರ್ಮಾಣ ಮಾಡಿದ್ದು, ಗುರುಕಿರಣ್ ಮ್ಯೂಸಿಕ್ ಕಂಪೋಸ್ ಮಾಡಿದ್ದಾರೆ.

ಮಹೇಶ್ ಅಮ್ಮಲಿ ದೊಡ್ಡಿ ರಚಿಸಿ ನಿರ್ದೇಶಿಸಿರುವ ‘ಲವ್’ ಸಿನಿಮಾ ತನ್ನ ಟೈಟಲ್ ಮೂಲಕವೇ ಪ್ರೇಕ್ಷಕರ ಗಮನ ಸೆಳೆದಿದ್ದು ಯುವ ಪ್ರತಿಭೆಗಳಾದ ಪ್ರಜಯ್ ಜಯರಾಮ್ ಹಾಗೂ ಋಷ ಪಾಟೀಲ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದಾರೆ. ರೋಮ್ಯಾಂಟಿಕ್ ಲವ್ ಸ್ಟೋರಿ ಕಥಾ ಹಂದರ ಹೊಂದಿರುವ ಈ ಚಿತ್ರ ಪ್ರೀತಿಗೆ ಯಾವ ಜಾತಿ ಧರ್ಮವಿಲ್ಲ ಎಂದು ಹೇಳಲು ಹೊರಟಿದೆ.

For Latest News Updates, Join Our Whatsapp Community🚩
RELATED ARTICLES

Most Popular