HomeLatest Newsಅವರು ಏನು ಬೇಕಾದರೂ ಮಾಡಬಹುದು, ನಾವು ಏನೂ ಮಾತನಾಡುವಂತಿಲ್ಲ: ಡಿಸಿಎಂ ಡಿಕೆ ವಿರುದ್ಧ ಕೆ.ಎನ್. ರಾಜಣ್ಣ...

ಅವರು ಏನು ಬೇಕಾದರೂ ಮಾಡಬಹುದು, ನಾವು ಏನೂ ಮಾತನಾಡುವಂತಿಲ್ಲ: ಡಿಸಿಎಂ ಡಿಕೆ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ತುಮಕೂರು: ಅವರು ಆರ್.ಎಸ್.ಎಸ್. ಗೀತೆ ಹಾಡಬಹುದು, ಖಾಸಗಿ ಕಾರ್ಯಕ್ರಮದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಅವರೊಂದಿಗೆ ವೇದಿಕೆ ಹಂಚಿಕೊಳ್ಳಬಹುದು. ಏನು ಬೇಕಾದರೂ ಮಾತನಾಡಬಹುದು, ನಾವು ಏನೂ ಮಾತನಾಡುವಂತಿಲ್ಲ ಎಂದು ಮಾಜಿ ಸಚಿವ ಕೆ.ಎನ್. ರಾಜಣ್ಣ ಅವರು ಡಿಸಿಎಂ ಡಿ.ಕೆ. ಶಿವಕುಮಾರ್ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಸುದ್ದಿಗಾರರೊಂದಿಗೆ ಮಾತನಾಡಿದ ರಾಜಣ್ಣ, ಡಿ.ಕೆ. ಶಿವಕುಮಾರ್ ವಿಧಾನಸಭೆ ಅಧಿವೇಶನದಲ್ಲಿ ಆರ್.ಎಸ್.ಎಸ್. ಗೀತೆ ಹಾಡಿರುವ ಕುರಿತಾಗಿ ಪ್ರತಿಕ್ರಿಯೆ ನೀಡಿ, ಅವರು ಆರ್.ಎಸ್.ಎಸ್. ಗೀತೆ ಹಾಡಬಹುದು, ಅಮಿತ್ ಶಾ ಜೊತೆಗೆ ವೇದಿಕೆ ಹಂಚಿಕೊಳ್ಳಬಹುದು. ಏನು ಬೇಕಾದರೂ ಮಾತನಾಡಬಹುದು. ಆದರೆ ನಾವು ಮಾತನಾಡುವಂತಿಲ್ಲ ಎಂದು ಹೇಳಿದ್ದಾರೆ.

ಪ್ರಯಾಗ್ ರಾಜ್ ನ ಗಂಗೆಯಲ್ಲಿ ಸ್ನಾನ ಮಾಡಿದ ಮಾತ್ರಕ್ಕೆ ಬಡತನ ನಿವಾರಣೆಯಾಗುವುದಿಲ್ಲ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದರು. ಇದಾದ ನಂತರ ಡಿ.ಕೆ. ಶಿವಕುಮಾರ್ ಅಲ್ಲಿಗೆ ಹೋಗಿ ಪುಣ್ಯ ಸ್ನಾನ ಮಾಡಿದರು. ಅಂಬಾನಿ ಮಗನ ಮದುವೆಯ ಆಮಂತ್ರಣವನ್ನು ಸ್ವೀಕರಿಸುವುದಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದರು. ಅಂತಹ ಮದುವೆಗೆ ಕುಟುಂಬ ಸಮೇತರಾಗಿ ಡಿಕೆಶಿ ಹೋಗಿದ್ದರು ಎಂದು ರಾಜಣ್ಣ ಕಿಡಿಕಾರಿದ್ದಾರೆ. ನಾವು ಯಾವುದೇ ಶಾಸಕರು, ಮಂತ್ರಿಗಳ ಸಭೆ ಕರೆಯುವಂತಿಗಿಲ್ಲ. ಬೇರೆಯವರು ಕರೆಯಬಹುದು, ಮಾತನಾಡಬಹುದು. ಇದಕ್ಕೆಲ್ಲ ಸೂಕ್ತ ಸಮಯದಲ್ಲಿ ಉತ್ತರ ಕೊಡುತ್ತೇನೆ ಎಂದು ಹೇಳಿದ್ದಾರೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular