ಕಸದ ಬುಟ್ಟಿಯಲ್ಲಿ ಬಿದ್ದಿದ್ದ ವರದಿ ಕೊಟ್ಟಿದ್ದಾರೆ; ಜಾತಿ ಗಣತಿ ವರದಿಗೆ ಶಾಮನೂರು ಶಿವಶಂಕರಪ್ಪ ಆಕ್ರೋಶ

ಹಿಂದುಳಿದ ವರ್ಗಗಳ ಶಾಶ್ವತ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ ಗುರುವಾರದಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಜಾತಿಗಣತಿ ವರದಿಯನ್ನು ಸಲ್ಲಿಸಿದ್ದು, ಇದಕ್ಕೆ ವಿರೋಧ ಪಕ್ಷಗಳಿಂದ ಮಾತ್ರವಲ್ಲದೆ ಆಡಳಿತರೂಢ ಕಾಂಗ್ರೆಸ್ ಸಚಿವ, ಶಾಸಕರಿಂದಲೂ ವಿರೋಧ ವ್ಯಕ್ತವಾಗಿದೆ.

ಈ ವರದಿಗೆ ಆರಂಭದಿಂದಲೂ ವಿರೋಧ ವ್ಯಕ್ತಪಡಿಸಿಕೊಂಡು ಬರುತ್ತಿರುವ ಅಖಿಲ ಭಾರತ ವೀರಶೈವ ಲಿಂಗಾಯಿತ ಮಹಾಸಭಾ ಅಧ್ಯಕ್ಷರು ಹಾಗೂ ಕಾಂಗ್ರೆಸ್ ಶಾಸಕರಾದ ಶಾಮನೂರು ಶಿವಶಂಕರಪ್ಪ, ಕಸದ ಬುಟ್ಟಿಯಲ್ಲಿ ಬಿದ್ದಿದ್ದ ಹತ್ತು ವರ್ಷಗಳಷ್ಟು ಹಳೆಯದಾದ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಈಗ ಸಲ್ಲಿಸಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಶನಿವಾರದಂದು ದಾವಣಗೆರೆಯಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಈ ವರದಿಯನ್ನು ಕಾಂತರಾಜ ಸಿದ್ಧಪಡಿಸಿದ್ದಾರೋ ಅಥವಾ ಜಯಪ್ರಕಾಶ್ ಹೆಗ್ಡೆ ಬರೆದಿದ್ದಾರೋ ಗೊತ್ತಿಲ್ಲ. ರಾಜ್ಯದಲ್ಲಿ ಲಿಂಗಾಯಿತರ ಜನಸಂಖ್ಯೆ ಎರಡು ಕೋಟಿಯಷ್ಟಿದ್ದು, ಮಹಾಸಭಾದ ವತಿಯಿಂದಲೇ ಜಾತಿ ಗಣತಿ ನಡೆಸುವ ಕುರಿತು ಚಿಂತನೆ ನಡೆಸಲಾಗಿದೆ ಎಂದಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read