HomeKarnatakaಮಹಿಷಿ ಉತ್ತರಾಧಿ ಮಠದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಕಳ್ಳ ಅರೆಸ್ಟ್

ಮಹಿಷಿ ಉತ್ತರಾಧಿ ಮಠದಲ್ಲಿ 1 ಕೋಟಿ ರೂ. ಮೌಲ್ಯದ ಚಿನ್ನ ದೋಚಿದ್ದ ಕಳ್ಳ ಅರೆಸ್ಟ್

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆಯ ಮಾಳೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಮಹಿಷಿ ಗ್ರಾಮದಲ್ಲಿರುವ ಶ್ರೀ ಸತ್ಯಸಂಧಗುರು ಉತ್ತರಾಧಿ ಮಠದಲ್ಲಿ ಕಳ್ಳತನ ಮಾಡಿದ್ದ ಆರೋಪಿಯನ್ನು ಬಂಧಿಸಿದ ಪೊಲೀಸರು 1 ಕೋಟಿ ರೂ. ಮೌಲ್ಯದ 16 ಹಲಗಾರತಿಗಳನ್ನು ವಶಕ್ಕೆ ಪಡೆದಿದ್ದಾರೆ.

ಶಿವಮೊಗ್ಗದ ರಾಘವೇಂದ್ರ ಆಚಾರ್ಯ(25) ಬಂಧಿತ ಆರೋಪಿ. ಮಠದಲ್ಲಿ ಚಿನ್ನ ಕಳವಾದ ಬಗ್ಗೆ ದಿನಾಂಕ: 17-06-2026 ರಂದು ಪ್ರಕರಣ ದಾಖಲಾಗಿದ್ದು, ಸದರಿ ಪ್ರಕರಣದಲ್ಲಿ ಆರೋಪಿ ಮತ್ತು ಮಾಲು ಪತ್ತೆಗಾಗಿ ಪೊಲೀಸ್ ಅಧೀಕ್ಷಕ ನಿಖಿಲ್ ಬಿ. ಅವರ ಮಾರ್ಗದರ್ಶನದಲ್ಲಿ ತೀರ್ಥಹಳ್ಳಿ ಉಪವಿಭಾಗ ಡಿವೈಎಸ್ಪಿ ಅರವಿಂದ ಕಲಗುಂಜಿ ಅವರ ಸೂಚನೆಯಂತೆ, ತೀರ್ಥಹಳ್ಳಿ ಪೊಲೀಸ್ ನಿರೀಕ್ಷಕ ಇಮ್ರಾನ್ ಬೇಗ್ ಹಾಗೂ ಮಾಳೂರು ಪೊಲೀಸ್ ಠಾಣಾ ವೃತ್ತ ನಿರೀಕ್ಷಕ ರಾಜಶೇಖರ, ಸಬ್ ಇನ್ಸ್ಪೆಕ್ಟರ್ ಸುನಿಲ್ ಕುಮಾರ್ ಹಾಗೂ ಸಿಬ್ಬಂದಿಗಳಾದ ಲಿಂಗೇಗೌಡ, ಸುರಕ್ಷಿತ್, ಕುಮಾರ್, ರವಿ, ಸುರೇಶ್ ನಾಯ್ಕ, ಸಂತೋಷ್, ವಿನಯ್ ಕುಮಾರ್ ಅವರನ್ನು ಒಳಗೊಂಡ ವಿಶೇಷ ತಂಡವನ್ನು ರಚನೆ ಮಾಡಿ ಆರೋಪಿಗಳ ವಿಶೇಷ ಮಾಹಿತಿ ಆಧರಿಸಿ ಪತ್ತೆ ಹಚ್ಚಲಾಗಿದೆ.

ಕಳ್ಳತನ ನಡೆಸಿದ ಆರೋಪಿತ ರಾಘವೇಂದ್ರ ಆಚಾರ್ಯ ಬಿನ್ ವಿಜಯೇಂದ್ರ ಆಚಾರ್ಯ, 25 ವರ್ಷ, ವಾಸ  ಗಾಂಧೀನಗರ, ಶಿವಮೊಗ್ಗ ರವರನ್ನು ದಿನಾಂಕ: 17-06-2026 ರಂದು ರಾತ್ರಿ 10 ಗಂಟೆಯ ಸಮಯದಲ್ಲಿ ವಶಕ್ಕೆ ಪಡೆದು ಆರೋಪಿ ಕಳ್ಳತನ ಮಾಡಿದ್ದ ಸುಮಾರು 780 ಗ್ರಾಂ ತೂಕದ ಬಂಗಾರದ 16 ಹಲಗಾರತಿಗಳು(ಅಂದಾಜು ಮೌಲ್ಯ 1,01,40,000 ರೂ.) ವಶಪಡಿಸಿಕೊಂಡು ತನಿಖೆಯನ್ನು ಮುಂದುವರೆಸಲಾಗಿರುತ್ತದೆ. ಈ ಬಗ್ಗೆ ಪತ್ತೆ ಕಾರ್ಯದಲ್ಲಿ ಪಾಲ್ಗೊಂಡ ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಪೊಲೀಸ್ ಆಧೀಕ್ಷಕರು ಅಭಿನಂದಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular