HomeKarnatakaಅಪಘಾತದಲ್ಲಿ ಮೃತಪಟ್ಟ ಮಹಿಳೆ ಮೇಲಿನ ಚಿನ್ನಾಭರಣ ದೋಚಿದ್ದ ಕಳ್ಳ ಅರೆಸ್ಟ್

ಅಪಘಾತದಲ್ಲಿ ಮೃತಪಟ್ಟ ಮಹಿಳೆ ಮೇಲಿನ ಚಿನ್ನಾಭರಣ ದೋಚಿದ್ದ ಕಳ್ಳ ಅರೆಸ್ಟ್

ಉಡುಪಿ: ಅಪಘಾತದಲ್ಲಿ ಮೃತಪಟ್ಟ ಮಹಿಳೆ ಮೇಲಿನ ಚಿನ್ನಾಭರಣ ದೋಚಿದ್ದ ಆರೋಪಿಯನ್ನು ಕೊಲ್ಲೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.

ಕೊಲ್ಲೂರಿನ ಕಲ್ಯಾಣಿ ಗುಡ್ಡೆ ನಿವಾಸಿ ಹೇಮಂತ್(40) ಬಂಧಿತ. ಆರೋಪಿ ಬಂಧಿತನಿಂದ 2.07 ಲಕ್ಷ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.

ಮೇ 17 ರಂದು ಕೊಲ್ಲೂರು ಸಮೀಪ ದಳಿಯಲ್ಲಿ ಕೇರಳ ಮೂಲದ ಪ್ರವಾಸಿಗರು ಇದ್ದ ಜೀಪ್ ಗೆ ಮೀನು ಸಾಗಣೆ ವಾಹನ ಡಿಕ್ಕಿಯಾಗಿ ಭೀಕರ ಅಪಘಾತ ಸಂಭವಿಸಿತ್ತು. ಅಪಘಾತದಲ್ಲಿ ಇಬ್ಬರು ಮಹಿಳೆಯರು ಮೃತಪಟ್ಟು ಎಂಟು ಮಂದಿ ಗಾಯಗೊಂಡಿದ್ದರು. ಕೇರಳದ ಜ್ಯೋತಿ ಮತ್ತು ಅರಿಯಾ ಅನೂಪ್ ಮೃತಪಟ್ಟಿದ್ದು, ಜ್ಯೋತಿಯವರ ಧರಿಸಿದ್ದ ಚಿನ್ನಾಭರಣ ನಾಪತ್ತೆಯಾಗಿದ್ದವು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅಪಘಾತದ ವೇಳೆ ಜನಸಂದಣಿಯಲ್ಲಿ ಗೊಂದಲದ ನಡುವೆ ಚಿನ್ನಾಭರಣ ಕಳವು ಮಾಡಲಾಗಿತ್ತು. ಮೃತ ಜ್ಯೋತಿ ಕುಟುಂಬದವರು ಘಟನೆ ನಡೆದ ಒಂದು ವಾರದ ನಂತರ ಕೊಲ್ಲೂರು ಪೊಲೀಸ್ ಠಾಣೆಗೆ ದೂರು ನೀಡಿದ್ದರು. ತನಿಖೆ ನಡೆಸಿದ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular