HomeLatest Newsಶಾಸಕರ ಜೇಬಿನಿಂದಲೇ ಹಣ ಎಗರಿಸಿದ್ದ ಕಳ್ಳ ವಶಕ್ಕೆ

ಶಾಸಕರ ಜೇಬಿನಿಂದಲೇ ಹಣ ಎಗರಿಸಿದ್ದ ಕಳ್ಳ ವಶಕ್ಕೆ

ರಾಯಚೂರು: ಶಾಸಕರ ಜೇಬಿನಿಂದ 70 ಸಾವಿರ ರೂ. ನಗದು ಎಗರಿಸಿದ ವ್ಯಕ್ತಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

 ರಾಯಚೂರು ನಗರದ ಕೃಷಿ ವಿವಿ ಕ್ರೀಡಾಂಗಣದಲ್ಲಿ ಶನಿವಾರ ಸಣ್ಣ ನೀರಾವರಿ ಸಚಿವ ಎನ್.ಎಸ್. ಭೋಸರಾಜ್ ಅವರ ಹುಟ್ಟು ಹಬ್ಬದ ಅಂಗವಾಗಿ ಅಭಿನಂದನಾ ಗ್ರಂಥ ಬಿಡುಗಡೆ ಕಾರ್ಯಕ್ರಮ ಹಮ್ಮಿಕೊಂಡಿದ್ದು, ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಲಿಂಗಸುಗೂರು ಶಾಸಕ ಡಿ.ಎಸ್. ಹುಲಗೇರಿ ಅವರ ಜೇಬಿಗೆ ಕೈ ಹಾಕಿ 70 ಸಾವಿರ ರೂ. ನಗದು ಹಾಗೂ ಶಾಸಕರ ಬೆಂಬಲಿಗರೊಬ್ಬರ ಚಿನ್ನದ ಸರ ಎಗರಿಸಿದ ವ್ಯಕ್ತಿ ಸಿಕ್ಕಿಬಿದ್ದಿದ್ದಾನೆ.

ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಕಾರ್ಯಕ್ರಮ ಮುಗಿದ ನಂತರ ಶಾಸಕರು ಸೇರಿದಂತೆ ಗಣ್ಯರಿಗೆ ಊಟದ ವ್ಯವಸ್ಥೆ ಮಾಡಿದ ಸ್ಥಳಕ್ಕೆ ನುಗ್ಗಿದ ವ್ಯಕ್ತಿಯೊಬ್ಬ ಹಣ ಎಗರಿಸಿದ್ದು, ತಕ್ಷಣ ಎಚ್ಚೆತ್ತುಕೊಂಡ ಶಾಸಕ ಹುಲಗೇರಿ ಆತನ ಕೈ ಹಿಡಿದು ಪೊಲೀಸರಿಗೆ ಒಪ್ಪಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular