ಮಹಾರಾಷ್ಟ್ರದಲ್ಲಿ ಕದ್ದ ಬಸ್ ಕರ್ನಾಟಕದಲ್ಲಿ ಬಿಟ್ಟು ಪರಾರಿ….!

ಅಪರಿಚಿತ ವ್ಯಕ್ತಿಯೊಬ್ಬ ಮಹಾರಾಷ್ಟ್ರ ಸಾರಿಗೆ ಸಂಸ್ಥೆಗೆ ಸೇರಿದ ಬಸ್ ಕಳವು ಮಾಡಿ ಅದನ್ನು ಕರ್ನಾಟಕದ ಗಡಿಯಲ್ಲಿ ಬಿಟ್ಟು ಪರಾರಿಯಾಗಿರುವ ಘಟನೆ ಬೆಳಕಿಗೆ ಬಂದಿದೆ.

ಮಹಾರಾಷ್ಟ್ರದ ಲಾತೂರು ಬಳಿಯ ಔರಾದ್ ಶಹಜಾನೆ ನಿಲ್ದಾಣದಲ್ಲಿ ನಿಲ್ಲಿಸಲಾಗಿದ್ದ ಈ ಬಸ್ ಅನ್ನು ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಕಳವು ಮಾಡಲಾಗಿದ್ದು, ಅಪರಿಚಿತ ವ್ಯಕ್ತಿ ಕರ್ನಾಟಕದ ಗಡಿವರೆಗೆ ಚಲಾಯಿಸಿಕೊಂಡು ಬಂದಿದ್ದಾನೆ.

ಈ ಬಸ್ ಇದೀಗ 14 ಕಿ.ಮೀ ದೂರದ ಕರ್ನಾಟಕದ ಕೇಸರ್ ಜವಳಗಾ ಗ್ರಾಮದಲ್ಲಿ ಪತ್ತೆಯಾಗಿದ್ದು, ಯಾರು ತೆಗೆದುಕೊಂಡು ಬಂದಿದ್ದಾರೆ ಹಾಗೂ ಯಾವ ಕಾರಣಕ್ಕೆ ಈ ಕೃತ್ಯ ಎಸಗಿದ್ದಾರೆ ಎಂಬುದು ತನಿಖೆ ಬಳಿಕ ಬಹಿರಂಗವಾಗಲಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read