Bengaluru : ‘ನಮ್ಮ ಕ್ಲಿನಿಕ್’ ಗಳ ಸೇವಾ ಅವಧಿ ವಿಸ್ತರಣೆಗೆ ಚಿಂತನೆ : ಸಚಿವ ದಿನೇಶ್ ಗುಂಡೂರಾವ್

ಬೆಂಗಳೂರು : ಬೆಂಗಳೂರಿನ ನಮ್ಮ ಕ್ಲಿನಿಕ್ಗಳ ಸಮಯ ಬದಲಿಸಲು ಚಿಂತನೆ ನಡೆಸಲಾಗಿದೆ, ಈ ಬಗ್ಗೆ ಶೀಘ್ರವೇ ಆದೇಶ ಹೊರಡಿಸಲಾಗುತ್ತದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.

ಸುದ್ದಿಗಾರರ ಜೊತೆ ಮಾತನಾಡಿದ ಸಚಿವರು  ಸಾರ್ವುಜನಿಕರ ಸಮಯ, ಅವರ ಅನುಕೂಲವನ್ನು ಗಮನದಲ್ಲಿಟ್ಟುಕೊಂಡು ಈ ನಿರ್ಧಾರ ತೆಗೆದುಕೊಳ್ಳಲಾಗುತ್ತಿದೆ. . ಮಧ್ಯಾಹ್ನ 12 ರಿಂದ ರಾತ್ರಿ 8 ರವರೆಗೆ ಕೆಲವು ಕೇಂದ್ರಗಳು ಕಾರ್ಯ ನಿರ್ವಹಿಸಲಿದ್ದು, ಹೆಚ್ಚಿನ ಜನರಿಗೆ ಅನುಕೂಲ ಮಾಡಿಕೊಡುತ್ತದೆ.

ಸಮಯ ಬದಲಾಯಿಸಿ ಕೆಲ ದಿನಗಳಕಾಲ ಕಾರ್ಯನಿರ್ವಹಣೆಯನ್ನು ನಾವು ಗಮನಿಸುತ್ತೇವೆ. ಸದ್ಯ, ಚಿಕಿತ್ಸಾಲಯಗಳು ಸೋಮವಾರದಿಂದ ಶನಿವಾರದವರೆಗೆ ಬೆಳಿಗ್ಗೆ 9 ರಿಂದ ಸಂಜೆ 4:30 ರವರೆಗೆ ಕಾರ್ಯ ನಿರ್ವಹಿಸುತ್ತಿವೆ.ಈ ಸಂಬಂಧ ಶೀಘ್ರದಲ್ಲೇ ಆದೇಶ ಹೊರಡಿಸಲಾಗುವುದು ಎಂದರು.

 

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read