HomeKarnatakaSHOCKING NEWS: ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ಯುವತಿಯ ಬರ್ಬರ ಹತ್ಯೆ

SHOCKING NEWS: ತೀರ್ಥಹಳ್ಳಿಯ ಲಾಡ್ಜ್ ನಲ್ಲಿ ಯುವತಿಯ ಬರ್ಬರ ಹತ್ಯೆ

ಶಿವಮೊಗ್ಗ: ಲಾಡ್ಜ್ ವೊಂದರಲ್ಲಿ ಯುವತಿಯನ್ನು ಬರ್ಬರವಾಗಿ ಕೊಲೆಗೈದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆಯಲ್ಲಿ ನಡೆದಿದೆ.

ಯುವಕ ಹಾಗೂ ಯುವತಿ ಏಪ್ರಿಲ್ 1ರಂದು ಲಾಡ್ಜ್ ನಲ್ಲಿ ರೂಮ್ ಬಾಡಿಗೆ ಪಡೆದಿದ್ದರು. ಇದೀಗ ಯುವತಿ ಲಾಡ್ಜ್ ರೂಮಿನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಶವವಾಗಿ ಪತ್ತೆಯಾಗಿದ್ದಾಳೆ.

ಲಾಡ್ಜ್ ಸಿಬ್ಬಂದಿ ರೂಮ್ ಗೆ ಬಂದು ನೋಡಿದಾಗ ಘಟನೆ ಬೆಳಕಿಗೆ ಬಂದಿದೆ. ಯುವತಿಯ ಜೊತೆ ಬಂದಿದ್ದ ಯುವಕನೇ ಆಕೆಯನ್ನು ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ತಿರ್ಥಹಳ್ಳಿ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವತಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಆಸ್ಪತ್ರೆಗೆ ರವಾನಿಸಿದ್ದಾರೆ. ಮೃತ ಯುವತಿಯ ಗುರುತು ಪತ್ತೆಯಾಗಿಲ್ಲ. ಪ್ರಕರಣ ದಾಖಲಿಸಿಕೊಂಡಿರುವ ತೀರ್ಥಹಳ್ಳಿ ಪೊಲಿಸರು ಆರೋಪಿ ಪತೆಗಾಗಿ ಶೋಧ ನಡೆಸಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular