HomeKarnatakaBREAKING: ಅರ್ಚಕರ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ; ಓರ್ವನ ಸ್ಥಿತಿ ಗಂಭೀರ

BREAKING: ಅರ್ಚಕರ ಮನೆಯಲ್ಲಿ ಒಂದೇ ಕುಟುಂಬದ ಮೂವರು ಸಜೀವ ದಹನ; ಓರ್ವನ ಸ್ಥಿತಿ ಗಂಭೀರ

ಶಿವಮೊಗ್ಗ: ಆನೇಕಲ್ ನಲ್ಲಿ ಪಟಾಕಿ ಅಂಗಡಿಯಲ್ಲಿ ಅಗ್ನಿ ದುರಂತ ಸಂಭವಿಸಿ 14 ಜನ ಸಜೀವ ದಹನಗೊಡಿರುವ ಘಟನೆ ನಡೆದಿರುವ ಬೆನ್ನಲ್ಲೇ ಶಿವಮೊಗ್ಗದ ತೀರ್ಥಹಳ್ಳಿಯ ಅರ್ಚಕರೊಬ್ಬರ ಮನೆಯಲ್ಲಿಯೂ ಅಗ್ನಿ ದುರಂತ ಸಂಭವಿಸಿದ್ದು, ಮೂವರು ಸಜೀವ ದಹನಗೊಂಡಿದ್ದಾರೆ. ಓರ್ವರ ಸ್ಥಿತಿ ಗಂಭೀರವಾಗಿದೆ.

ತೀರ್ಥಹಳ್ಳಿ ತಾಲೂಕಿನ ಅರಳಸುರಳಿ ಬಳಿಯ ಕೆಕೋಡ್ ಎಂಬಲ್ಲಿ ಅರ್ಚಕರ ಮನೆಯೊಂದರಲ್ಲಿ ಈ ದುರಂತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಮನೆಯ ಒಳಗಡೆ ಕೋಣೆಯಲ್ಲಿ ಕಟ್ಟಿಗೆಗಳನ್ನು ಹಾಕಿಕೊಂಡು ಬೆಂಕಿ ಹಚ್ಚಿಕೊಂಡಿರುವ ಶಂಕೆ ವ್ಯಕ್ತವಾಗಿದೆ. ಆದರೆ ದುರಂತಕ್ಕೆ ನಿಖರ ಕಾರಣ ತಿಳಿದುಬಂದಿಲ್ಲ.

ಬೆಂಕಿ ದುರಂತದಲ್ಲಿ ಅರ್ಚಕ ರಾಘವೇಂದ್ರ ಕೆಕೋಡ್ (63), ಪತ್ನಿ ನಾಗರತ್ನ (55), ಹಿರಿಯ ಪುತ್ರ ಶ್ರೀರಾಮ್ (34) ಸಜೀವ ದಹನವಾಗಿದ್ದಾರೆ. ಇನ್ನೋರ್ವ ಪುತ್ರ ಭರತ್ (33) ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

 

For Latest News Updates, Join Our Whatsapp Community🚩
RELATED ARTICLES

Most Popular