ʼದೊಡ್ಡ ಪತ್ರೆʼಯಿಂದ ಇದೆ ಈ ಆರೋಗ್ಯ ಪ್ರಯೋಜನ

ನಮ್ಮ ಮನೆಯ ಹಿತ್ತಲಲ್ಲೇ ಸಿಗುವ ಗಿಡಗಳು ಅನೇಕ ಖಾಯಿಲೆಗಳನ್ನು ಶಮನ ಮಾಡುವ ಶಕ್ತಿ ಹೊಂದಿರುತ್ತವೆ. ಹಿಂದಿನ ಕಾಲದ ಜನರು ಆಯುರ್ವೇದ ಔಷಧಗಳನ್ನು ಇಂತಹ ಗಿಡ ಗಂಟಿ, ಬೇರುಗಳಿಂದಲೇ ತಯಾರಿಸುತ್ತಿದ್ದರು. ಅಂತಹ ಒಂದು ಗಿಡಗಳಲ್ಲಿ ದೊಡ್ಡಪತ್ರೆಯೂ ಒಂದು.

ದೊಡ್ಡಪತ್ರೆ ಎಲೆ, ತುಳಸಿ ಎಲೆ ಮತ್ತು ವೀಳ್ಯದೆಲೆಯನ್ನು ಅರೆದು ರಸ ತೆಗೆದು ಅದಕ್ಕೆ ಜೇನುತುಪ್ಪ ಬೆರೆಸಿ ಕುಡಿದರೆ ನೆಗಡಿ, ಕೆಮ್ಮು ದೂರವಾಗುತ್ತದೆ.

ಮಕ್ಕಳಿಗೆ ಜ್ವರ ಬಂದಾಗ ದೊಡ್ಡಪತ್ರೆ ಎಲೆ ಬಾಡಿಸಿ ನೆತ್ತಿಯ ಮೇಲೆ ಇಡುತ್ತಾರೆ.

ಈ ಎಲೆಗಳ ಪೇಸ್ಟ್ ತಯಾರಿಸಿ ಅದನ್ನು ಚೇಳು ಕಚ್ಚಿದ ಗಾಯಕ್ಕೆ ಹಚ್ಚಿದರೆ ನೋವು ದೂರವಾಗುತ್ತದೆ.

ಒಂದು ವಾರದವರೆಗೆ ದೊಡ್ಡ ಪತ್ರೆಯ ಎಲೆಗಳನ್ನು ತಿಂದರೆ ಅರಿಶಿಣ ಕಾಮಾಲೆ ವಾಸಿಯಾಗುತ್ತದೆ.

ದೊಡ್ಡಪತ್ರೆಯನ್ನು ಜೀರಿಗೆ, ಎಳ್ಳಿನೊಂದಿಗೆ ಹುರಿದು ಕಾಯಿತುರಿ ಜೊತೆ ರುಬ್ಬಿ ಅದಕ್ಕೆ ಉಪ್ಪು, ಮಜ್ಜಿಗೆ ಹಾಕಿ ತಂಬುಳಿ ಮಾಡಿ ಕುಡಿದರೆ ಪಿತ್ತದ ಖಾಯಿಲೆಗಳು ಗುಣಮುಖವಾಗುವುದು.

ದೊಡ್ಡಪತ್ರೆ ಎಲೆಯನ್ನು ಉಪ್ಪಿನ ಸಹಿತ ತಿಂದರೆ ಜೀರ್ಣಶಕ್ತಿ ಅಧಿಕವಾಗುತ್ತದೆ.

ದೊಡ್ಡ ಪತ್ರೆ ಎಲೆಯನ್ನು ಹುಳುಕಡ್ಡಿಯ ಭಾಗಕ್ಕೆ ತಿಕ್ಕುತ್ತಿದ್ದರೆ ಹುಳುಕಡ್ಡಿಯ ನಿವಾರಣೆ ಸಾಧ್ಯ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read