HomeKarnatakaBIG NEWS : ಇದು ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮಕ್ಕೆ ಸಿಕ್ಕಿರುವ ಜಯ :...

BIG NEWS : ಇದು ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮಕ್ಕೆ ಸಿಕ್ಕಿರುವ ಜಯ : ಸಿಎಂ ಸಿದ್ದರಾಮಯ್ಯ

ಬೆಂಗಳೂರು : ಸತತ ಸೋಲು, ಅಪಪ್ರಚಾರ ಮತ್ತು ಅಧಿಕಾರದ ದುರ್ಬಳಕೆ ಮೂಲಕ ನಡೆಸುತ್ತಾ ಬಂದ ಬಿಜೆಪಿ ದಮನ-ದೌರ್ಜನ್ಯದಿಂದ ನಲುಗಿಹೋಗಿದ್ದ ಕಾಂಗ್ರೆಸ್ ಎಲ್ಲವನ್ನು ಎದುರಿಸಿ ಫೀನಿಕ್ಸ್ ನಂತೆ ಮತ್ತೆ ಎದ್ದು ನಿಂತಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ಇದು ಸತ್ಯ, ನ್ಯಾಯ ಮತ್ತು ನಿಜವಾದ ಧರ್ಮಕ್ಕೆ ಸಿಕ್ಕಿರುವ ಜಯ. ಸುಳ್ಳು, ಅನ್ಯಾಯ ಮತ್ತು ಅಧರ್ಮದ ಮೂಲಕ ದೇಶವನ್ನು ಹತ್ತು ವರ್ಷ ಆಳಿದ್ದ ಬಿಜೆಪಿಗೆ ದೇಶದ ಪ್ರಜ್ಞಾವಂತ ಮತದಾರರು ಪಾಠ ಕಲಿಸಿದ್ದಾರೆ. ಈ ಪ್ರಜ್ಞಾವಂತ ಮತದಾರರಿಗೆ ನನ್ನ ಮತ್ತು ನಮ್ಮ ಪಕ್ಷದ ಹಾರ್ದಿಕ ಅಭಿನಂದನೆಗಳು.

ರಾಹುಲ್ ಗಾಂಧಿಯವರ ಎರಡು ಯಾತ್ರೆಗಳು ಫಲ ನೀಡಿವೆ. ಕಾಂಗ್ರೆಸ್ ಮತ್ತು ರಾಹುಲ್ ಗಾಂಧಿಯವರನ್ನು ದೇಶದ ಜನತೆ ಬಹಳ ದೊಡ್ಡ ಮಟ್ಟದಲ್ಲಿ ಒಪ್ಪಿಕೊಂಡಿದ್ದಾರೆ. ಎರಡೂ ಕ್ಷೇತ್ರಗಳಲ್ಲೂ ರಾಹುಲ್ ‍ಗಾಂಧಿ ಭರ್ಜರಿ ಮತಗಳಿಂದ ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಕೈಯಲ್ಲಿ ಸಂವಿಧಾನ ಹಿಡಿದೇ ರಾಹುಲ್ ಗಾಂಧಿಯವರು ಇಡೀ ದೇಶದಲ್ಲಿ ಚುನಾವಣಾ ಪ್ರಚಾರ ಮಾಡಿದರು. ದೇಶದ ಜನ ಸಂವಿಧಾನದ ಉಳಿವಿಗೆ, ಪ್ರಜಾಪ್ರಭುತ್ವ ಉಳಿವಿಗಾಗಿ ರಾಹುಲ್ ಗಾಂಧಿಯವರ ಕೈ ಹಿಡಿದಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕಳೆದ ಹತ್ತು ವರ್ಷ ದೇಶದ ಜನರ ಪಾಲಿಗೆ ಮಾತ್ರವಲ್ಲ ಕಾಂಗ್ರೆಸ್ ಪಕ್ಷಕ್ಕೆ ಕೂಡಾ ಅತ್ಯಂತ ಕಷ್ಟದ ಕಾಲ. ನಮ್ಮ ನಾಯಕರ ಮೇಲೆ ಐಟಿ-ಇಡಿ ದಾಳಿ ನಡೆಸಿದರು, ನಮ್ಮವರನ್ನು ಜೈಲಿಗೆ ಹಾಕಿದರು. ಸುಳ್ಳು ಮೊಕದ್ದಮೆ ಹೂಡಿದರು. ಪಕ್ಷದ ಬ್ಯಾಂಕ್ ಖಾತೆಗಳನ್ನು ಸ್ಘಗಿತಗೊಳಿಸಿದರು. ನಮ್ಮ ನಾಯಕರಾದ ಸೋನಿಯಾಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ದ ಸುಳ್ಳು ಪ್ರಕರಣಗಳನ್ನು ದಾಖಲಿಸಿ ಚಿತ್ರಹಿಂಸೆ ನೀಡಿದರು. ನಿರಂತರವಾಗಿ ಸುಳ್ಳು ಪ್ರಚಾರ ಮಾಡಿ ಮಾನಸಿಕವಾಗಿ ಕುಗ್ಗಿಸುವ ಪ್ರಯತ್ನ ಮಾಡಿದರು. ಇಂತಹ ಸುಳ್ಳು, ಅಪಪ್ರಚಾರ, ಚಾರಿತ್ರ್ಯಹನನದಂತಹ ಪ್ರಯತ್ನಗಳಿಂದ ಎದೆಗುಂದದೆ ರಾಹುಲ್ ಗಾಂಧಿಯವರು ಕಷ್ಟಕಾಲದಲ್ಲಿ ಪಕ್ಷವನ್ನು ಮುನ್ನಡೆಸಿದರು. ನಾಯಕರನ್ನು ಕಾರ್ಯಕರ್ತರನ್ನು ಹುರಿದುಂಬಿಸಿದರು. ಇದರಿಂದಾಗಿ ಈ ಚುನಾವಣೆಯಲ್ಲಿ ನಮ್ಮ ಪಕ್ಷ ಮತ್ತು ಇಂಡಿಯಾ ಒಕ್ಕೂಟದ ಮಿತ್ರಪಕ್ಷಗಳನ್ನು ದೇಶದ ಜನತೆ ಬೆಂಬಲಿಸಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular