ಉತ್ತರಾಧಿಕಾರಿ ನೇಮಕ ಮಾಡಲು ಇದು ರಾಜರ ಮನೆಯಲ್ಲ, ಇತಿಮಿತಿ ಅರಿತು ಮಾತಾಡಲಿ: ಯತೀಂದ್ರ ಹೇಳಿಕೆಗೆ ಕಾಂಗ್ರೆಸ್ ಶಾಸಕರ ತಿರುಗೇಟು

ಮುಖ್ಯಮಂತ್ರಿ ಬದಲಾವಣೆ ಉತ್ತರ ಅಧಿಕಾರಿ ನೇಮಕದ ಬಗ್ಗೆ ವಿಧಾನಪರಿಷತ್ ಸದಸ್ಯ ಡಾ. ಯತೀಂದ್ರ ಸಿದ್ದರಾಮಯ್ಯ ನೀಡಿದ ಹೇಳಿಕೆಗೆ ಕಾಂಗ್ರೆಸ್ ಶಾಸಕರು ಆಕ್ಷೇಪ ವ್ಯಕ್ತಪಡಿಸಿದ್ದಾರೆ.

ಉತ್ತರಾಧಿಕಾರಿ ನೇಮಕ ಮಾಡಲು ಇದು ಮೈಸೂರು ರಾಜರ ಮನೆಯಲ್ಲ ಎಂದು ಪರೋಕ್ಷವಾಗಿ ಯತೀಂದ್ರ ಸಿದ್ದರಾಮಯ್ಯ ಅವರಿಗೆ ದಾವಣಗೆರೆ ಜಿಲ್ಲೆ ಚನ್ನಗಿರಿ ಶಾಸಕ ಶಿವಗಂಗಾ ಬಸವರಾಜ್ ತಿವಿದಿದ್ದಾರೆ.

ದಾವಣಗೆರೆಯಲ್ಲಿ ಮಾತನಾಡಿದ ಅವರು, ರಾಜರ ವಂಶದಲ್ಲಿ ಉತ್ತರಾಧಿಕಾರ ಪದ್ಧತಿ ಇರುತ್ತದೆ. ಕಾಂಗ್ರೆಸ್ ಹೈಕಮಾಂಡ್ ಪಕ್ಷ, ಹೈಕಮಾಂಡ್ ನಿರ್ಧಾರಕ್ಕೆ ಬದ್ಧರಾಗಿರಬೇಕು. ಮುಂದಿನ ಮುಖ್ಯಮಂತ್ರಿ ಯಾರೆನ್ನುವುದನ್ನು ಹೈಕಮಾಂಡ್ ನಿರ್ಧರಿಸುತ್ತದೆ. ಈಗ ಸುಖಾಸುಮ್ಮನೆ ಏನೇನೋ ಹೇಳಿಕೆ ನೀಡಿ, ಪಕ್ಷಕ್ಕೆ ಮುಜುಗರ ತರುವ ಕೆಲಸ ಮಾಡಬಾರದು ಎಂದು ಹೇಳಿದ್ದಾರೆ.

ಸಿಎಂ ಬದಲಾವಣೆ ಚರ್ಚೆಗೆ ಗ್ರಾಸವಾಗಿರುವ ಯತೀಂದ್ರ ಅವರ ಹೇಳಿಕೆ ಎಳುಸುತನದಿಂದ ಕೂಡಿದೆ. ಅವರ ಮಾತಿನ್ನೂ ಬಲಿತಿಲ್ಲ. ಜೊತೆಗೆ ಶಕ್ತಿಯುತ ಇಲ್ಲ. ಅವರು ವಿಧಾನ ಪರಿಷತ್ ಸದಸ್ಯರೇ ಹೊರತು ವಿಧಾನಸಭೆ ಸದಸ್ಯರಲ್ಲ. ತಮ್ಮ ಇತಿಮಿತಿ ಅರಿತು ಗೌರವಯುತ ಹೇಳಿಕೆ ನೀಡಬೇಕು. ಸಿಎಂ ಬದಲಾವಣೆ ವಿಷಯದಲ್ಲಿ ಯಾವುದೇ ಗೊಂದಲ ಸೃಷ್ಟಿಸಬಾರದು ಎಂದು ಶಾಸಕ ಇಕ್ಬಾಲ್ ಹುಸೇನ್ ಹೇಳಿದ್ದಾರೆ.

ರಾಮನಗರ ತಾಲೂಕಿನ ಅಂಕನಹಳ್ಳಿಯಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಹುಸೇನ್, ಸಿಎಂ ಬದಲಾವಣೆ ಬಗ್ಗೆ ನಾವೇನಾದರೂ ಹೇಳಿಕೆ ನೀಡಿದರೆ ನೋಟಿಸ್ ಕೊಡ್ತಾರೆ. ಆದರೆ ನಾವು ಮಾಡಿದರೆ ಬಲತ್ಕಾರ, ಬೇರೆಯವರು ಮಾಡಿದರೆ ಚಮತ್ಕಾರ ಎನ್ನುವ ಪರಿಸ್ಥಿತಿ ಇದೆ. ದೊಡ್ಡ ಮನೆತನದ ದೊಡ್ಡ ಸ್ಥಾನದಲ್ಲಿರುವ ಯತಿಂದ್ರ ತಾವಾಗಿಯೇ ಕೆಳಗೆ ಬೀಳುವುದು ನಮಗೆ ಇಷ್ಟವಿಲ್ಲ. ಅಂತಹ ಹೇಳಿಕೆ ನೀಡದೆ ತಿದ್ದಿಕೊಳ್ಳುತ್ತಾರೆ ಎನ್ನುವ ವಿಶ್ವಾಸವಿದೆ ಎಂದು ಹೇಳಿದ್ದಾರೆ.

ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ನೇತೃತ್ವದ ಸರ್ಕಾರ ಉತ್ತಮ ಕೆಲಸ ಮಾಡುತ್ತಿದೆ. 2028ರಲ್ಲೂ ಪಕ್ಷವನ್ನು ಅಧಿಕಾರಕ್ಕೆ ತರಲು ಶ್ರಮಿಸುತ್ತಿದ್ದಾರೆ. ಡಿ.ಕೆ. ಶಿವಕುಮಾರ್ ಸಮರ್ಥ ನಾಯಕ. ಪಕ್ಷ ಸಂಘಟನೆಗೆ ಹೆಚ್ಚಿನ ಶ್ರಮ ಹಾಕಿ ನಮಗೆ ಶಕ್ತಿ ತುಂಬುತ್ತಿದ್ದಾರೆ. ಹೀಗಿರುವಾಗ ಸಿಎಂ ಬದಲಾವಣೆ ವಿಷಯದಲ್ಲಿ ಯಾರೂ ಕೂಡ ಗೊಂದಲದ ಹೇಳಿಕೆ ನೀಡಬಾರದು ಎಂದು ಇಕ್ಬಾಲ್ ಹುಸೇನ್ ಹೇಳಿದ್ದಾರೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read