ಅಕ್ರಾ(ಘಾನಾ): ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಸಮಸ್ಯೆಗೆ ಪರಿಹಾರ ಸಿಗುವುದಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.
ಘಾನಾ ರಾಜಧಾನಿ ಅಕ್ರಾದಲ್ಲಿ ಮಾತನಾಡಿದ ಪ್ರಧಾನಿ ಮೋದಿ, ಯುದ್ಧ, ಸಂಘರ್ಷದ ಬದಲು ಶಾಂತಿಯುತ ಮಾತುಕತೆ ನಡೆಸಬೇಕು. ರಾಜತಾಂತ್ರಿಕತೆ ಮಾತುಕತೆಯ ಮೂಲಕ ಸಮಸ್ಯೆಯನ್ನು ಪರಿಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ರಷ್ಯಾ –ಉಕ್ರೇನ್, ಇರಾನ್-ಇಸ್ರೇಲ್ ಯುದ್ಧದ ವಿಚಾರಕ್ಕೆ ಸಂಬಂಧಿಸಿದಂತೆ ಮಾತನಾಡಿದ ಮೋದಿ, ಇದು ಯುದ್ಧದ ಯುಗವಲ್ಲ, ಸಂಘರ್ಷಗಳಿಂದ ಪರಿಹಾರ ಸಿಗುವುದಿಲ್ಲ. ಮಾತುಕತೆ ಮೂಲಕ ಸಮಸ್ಯೆ ಬಗೆಹರಿಸಿಕೊಳ್ಳಬೇಕು ಎಂದು ಹೇಳಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರಿಗೆ ಬುಧವಾರ ಘಾನಾದ ರಾಷ್ಟ್ರೀಯ ಗೌರವ ‘ದಿ ಆಫೀಸರ್ ಆಫ್ ದಿ ಆರ್ಡರ್ ಆಫ್ ದಿ ಸ್ಟಾರ್ ಆಫ್ ಘಾನಾ’ ಪ್ರದಾನ ಮಾಡಲಾಯಿತು. ಮೋದಿ ಅವರ ವಿಶಿಷ್ಟ ರಾಜನೀತಿ ಮತ್ತು ಪ್ರಭಾವಶಾಲಿ ಜಾಗತಿಕ ನಾಯಕತ್ವವನ್ನು ಗುರುತಿಸಿ ಘಾನಾದ ಅಧ್ಯಕ್ಷ ಜಾನ್ ಡ್ರಾಮಣಿ ಮಹಾಮ ಅವರು ಪ್ರಶಸ್ತಿ ಪ್ರದಾನ ಮಾಡಿದ್ದಾರೆ.