HomeKarnatakaತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ: ಸಚಿವ ಪರಮೇಶ್ವರ್

ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ: ಸಚಿವ ಪರಮೇಶ್ವರ್

ತುಮಕೂರು: ಕರ್ನಾಟಕ ಅಥ್ಲೆಟಿಕ್ಸ್ ಅಸೋಸಿಯೇಷನ್ ಹಾಗೂ ತುಮಕೂರು ಜಿಲ್ಲಾಡಳಿತದ ಸಹಯೋಗದಲ್ಲಿ ಏಪ್ರಿಲ್ 24ರಿಂದ ಮೂರು ದಿನಗಳವರೆಗೆ ತುಮಕೂರು ನಗರದಲ್ಲಿ ನಡೆಯಲಿರುವ “24ನೇ ರಾಷ್ಟ್ರೀಯ ಕಿರಿಯರ 20 ವರ್ಷದೊಳಗಿನವರ ಅಥ್ಲೆಟಿಕ್ಸ್ ಫೆಡರೇಷನ್ ಕ್ರೀಡಾಕೂಟ” ನಡೆಯಲಿದೆ ಎಂದು ಗೃಹ ಸಚಿವ ಡಾ.ಜಿ. ಪರಮೇಶ್ವರ್ ಪತ್ರಿಕಾಗೋಷ್ಠಿಯಲ್ಲಿ ಮಾಹಿತಿ ನೀಡಿದ್ದಾರೆ.

ತುಮಕೂರಿನಲ್ಲಿ ಇದೇ ಮೊದಲ ಬಾರಿಗೆ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ ಕ್ರೀಡಾಕೂಟ ನಡೆಯುತ್ತಿದ್ದು, ಇದು ಜಿಲ್ಲೆಗೆ ಹೆಮ್ಮೆಯ ವಿಷಯ. ಹೊಸದಾಗಿ ಅಭಿವೃದ್ಧಿಪಡಿಸಿರುವ ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ವಿಶ್ವದರ್ಜೆಯ ಸಿಂಥೆಟಿಕ್ ಟ್ರ್ಯಾಕ್ ಮತ್ತು ಅಂತರಾಷ್ಟ್ರೀಯ ಗುಣಮಟ್ಟದ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸಿದ್ದು, ರಾಷ್ಟ್ರೀಯ ಮಟ್ಟದ ಇಂತಹ ಚಾಂಪಿಯನ್ ಶಿಪ್ ಕ್ರೀಡಾಕೂಟ ನಡೆಯುತ್ತಿದ್ದು, ತುಮಕೂರು ಈಗ ವಿಶ್ವದ ಗಮನ ಸೆಳೆಯುತ್ತಿದೆ.

28 ರಾಜ್ಯಗಳಿಂದಲೂ ಬಾಲಕ/ಬಾಲಕಿಯರು ಸೇರಿ ಸುಮಾರು 1500 ಕ್ರೀಡಾಪಟುಗಳು ತಮ್ಮ ರಾಜ್ಯವನ್ನು ಪ್ರತಿನಿಧಿಸಿ 40 ಸ್ಪರ್ಧೆಗಳಲ್ಲಿ ಭಾಗವಹಿಸಲಿದ್ದಾರೆ. ಜೆಎಸ್‌ಡಬ್ಲ್ಯೂ ಸ್ಪೋರ್ಟ್ಸ್ ಮತ್ತು ರಿಲಾಯನ್ಸ್ ಫೌಂಡೇಶನ್ ತಂಡಗಳು ಕರ್ನಾಟಕದ ಬಲಿಷ್ಠ ತಂಡಗಳಾಗಿ ವಿವಿಧ ಕ್ರೀಡಾ ಸ್ಪರ್ಧೆಗಳಲ್ಲಿ ಪ್ರತ್ಯೇಕವಾಗಿ ಪ್ರತಿನಿಧಿಸುತ್ತಿದ್ದು, ಆಗಸ್ಟ್ 5 ರಿಂದ 9ರವರೆಗೆ ಅಮೆರಿಕಾದ ಒರೆಗಾನ್ ಸ್ಟೇಟ್‌ ನಲ್ಲಿ ನಡೆಯುವ ವಿಶ್ವ ಚಾಂಪಿಯನ್‌ ಶಿಪ್ ಅಥ್ಲೆಟಿಕ್ ಕ್ರೀಡಾಕೂಟಕ್ಕೆ ಭಾರತದಿಂದ ಪ್ರತಿನಿಧಿಸುವ ಕ್ರೀಡಾಪಟುಗಳನ್ನು ಈ ಕ್ರೀಡಾಕೂಟದಲ್ಲಿ ಆಯ್ಕೆ ಮಾಡುವ ಅತ್ಯಂತ ಪ್ರಮುಖ ಕ್ರೀಡಾಕೂಟ ಇದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

24ನೇ ರಾಷ್ಟ್ರೀಯ ಜೂನಿಯರ್ ಅಥ್ಲೆಟಿಕ್ಸ್ ಪ್ರತಿಷ್ಠಿತ ಕ್ರೀಡಾಕೂಟವನ್ನು ತುಮಕೂರಿನಲ್ಲಿ ನಡೆಸಲು ಅವಕಾಶ ಕಲ್ಪಿಸಿದ ಅಥ್ಲೆಟಿಕ್ ಫೆಡರೇಷನ್ ಆಫ್ ಇಂಡಿಯಾದ ಮುಖ್ಯಸ್ಥರಿಗೆ ಧನ್ಯವಾದ. ತುಮಕೂರಿನಲ್ಲಿ ಇಂತಹ ಪ್ರತಿಷ್ಠಿತ ಕ್ರೀಡಾಕೂಟ ನಡೆಯುತ್ತಿರುವುದು ಹೆಮ್ಮೆಯ ವಿಷಯ. ಜಿಲ್ಲೆಯ ಯುವ ಪ್ರತಿಭೆಗಳಿಗೆ ಇದೊಂದು ಸುವರ್ಣಾವಕಾಶ ಎಂದು ಸಚಿವ ಪರಮೇಶ್ವರ್ ತಿಳಿಸಿದ್ದಾರೆ.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾ ಪಂಚಾಯಿತಿ ಸಿಇಒ ಬಿ.ವಿ.ಅಶ್ವಿಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ.ವಿ.ಅಶೋಕ್, ಕರ್ನಾಟಕ ಅಥ್ಲೆಟಿಕ್ ಅಸೋಸಿಯೇಷನ್ ಕಾರ್ಯದರ್ಶಿ ಸತ್ಯನಾರಾಯಣ್ ಹಾಗೂ ಸಂಸ್ಥೆಯ ಪ್ರತಿನಿಧಿ ರಾಜು ಅವರು ಉಪಸ್ಥಿತರಿದ್ದರು.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular