ಬೆಂಗಳೂರು : ಕನ್ನಡ ಚಿತ್ರರಂಗ ಕಂಡಂತಹ ಸೂಪರ್ ಸ್ಟಾರ್ ನಟಿ ಬಿ.ಸರೋಜಾದೇವಿ ವಿಧಿವಶರಾಗಿದ್ದಾರೆ. ಕನ್ನಡ, ತಮಿಳು, ತೆಲುಗು ಹಿಂದಿ ಸೇರಿದಂತೆ ಹಲವಾರು ಭಾಷೆಗಳ 200ಕ್ಕೂ ಅಧಿಕ ಚಲನಚಿತ್ರಗಳಲ್ಲಿ ಅಭಿನಯಿಸಿ ಹಲವು ಪ್ರಶಸ್ತಿ ಮುಡಿಗೇರಿಸಿಕೊಂಡಿದ್ದ ನಟಿ ಬಿ.ಸರೋಜಾದೇವಿ ಇಂದು ಇಹಲೋಕ ತ್ಯಜಿಸಿದ್ದಾರೆ.
ಹಿರಿಯ ನಟಿ ಸರೋಜಾದೇವಿ ದೇವಿ ನಟಿಸಿದ್ದ ಕೊನೆಯ ಸಿನಿಮಾ ಇದು..?
ಹಿರಿಯ ನಟಿ ಸರೋಜಾದೇವಿ ದೇವಿ ನಟಿಸಿದ್ದ ಕೊನೆಯ ಸಿನಿಮಾ ನಟ ಸಾರ್ವಭೌಮ. ಹೌದು, 2019 ರಲ್ಲಿ ತೆರೆಕಂಡ ನಟ ಪುನೀತ್ ಅಭಿನಯದ ಸಾರ್ವಭೌಮ ಸಿನಿಮಾದಲ್ಲಿ ನಟಿ ಬಿ,ಸರೋಜಾದೇವಿ ಕೊನೆಯದಾಗಿ ಕಾಣಿಸಿಕೊಂಡಿದ್ದರು. ಈ ಚಿತ್ರದಲ್ಲಿ ಅಪ್ಪು ಜೊತೆ ಸರೋಜಾದೇವಿ ಚಿಕ್ಕ ಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಆದರೆ ಇಬ್ಬರು ಕೂಡ ಇಂದು ನಮ್ಮ ಜೊತೆ ಇಲ್ಲ.
ಕನ್ನಡದಲ್ಲಿ ಡಾ.ರಾಜ್ಕುಮಾರ್, ಕಲ್ಯಾಣ್ಕುಮಾರ್, ಉದಯಕುಮಾರ್ ಅವರ ಜೊತೆ ನಟಿಸಿದರು. ತೆಲುಗಿನಲ್ಲಿ ಎ. ನಾಗೇಶ್ವರರಾವ್, ಎನ್.ಟಿ. ರಾಮರಾವ್ ಅವರ ಜೊತೆ ನಟಿಸಿದರು. ತಮಿಳಿನಲ್ಲಿ ಜೆಮಿನಿ ಗಣೇಶನ್, ಶಿವಾಜಿಗಣೇಶನ್ ಜೊತೆಗೆ ೨೨ ಹಿಟ್ ಚಿತ್ರಗಳಲ್ಲಿ, ಎಂ.ಜಿ. ರಾಮಚಂದ್ರನ್ ಜೊತೆ ೨೬ ಹಿಟ್ ಚಿತ್ರಗಳಲ್ಲಿ ನಟಿಸಿದರು. ಹಿಂದಿಯಲ್ಲಿ ದಿಲೀಪ್ ಕುಮಾರ್, ರಾಜೇಂದ್ರಕುಮಾರ್, ಶಮ್ಮೀಕಪೂರ್, ಸುನಿಲ್ದತ್ ಜೊತೆ ನಟಿಸಿದ ಸರೋಜಾದೇವಿ, ಚತುರ್ಭಾಷಾ ತಾರೆ ಎಂಬ ಹೆಗ್ಗಳಿಕೆಗೆ ಪಾತ್ರರಾದ ಮೊದಲ ಕನ್ನಡ ನಟಿ ಇವರು. ದಶಕಗಳ ನಂತರ ಜಯಂತಿ ನಾಲ್ಕು ಭಾಷೆಯಲ್ಲಿ ನಟಿಸಿದರು.