ರೋಗ ನಿರೋಧಕ ಶಕ್ತಿ ಹೆಚ್ಚಿಸುತ್ತೆ ಈ ಜ್ಯೂಸ್

ಆರೋಗ್ಯವಾಗಿರಲು ರೋಗ ನಿರೋಧಕ ಶಕ್ತಿ ಹೆಚ್ಚು ಮುಖ್ಯ. ಕೊರೊನಾ ಸಂದರ್ಭದಲ್ಲಿ ವಿಟಮಿನ್ ಸಿ ಮಹತ್ವದ ಪಾತ್ರ ವಹಿಸುತ್ತದೆ. ವಿಟಮಿನ್ ಸಿ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸುವ ಜೊತೆಗೆ ರೋಗದಿಂದ ನಮ್ಮನ್ನು ದೂರವಿಡುತ್ತದೆ. ವಿಟಮಿನ್ ಸಿ ಹೆಚ್ಚಿಸಿಕೊಳ್ಳಲು ನುಗ್ಗೆ ಸೊಪ್ಪಿನ ಎಲೆ ಹಾಗೂ ನೆಲ್ಲಿಕಾಯಿ ಬಹಳ ಪ್ರಯೋಜನಕಾರಿ.

ಇವೆರಡರ ಜ್ಯೂಸ್ ಸೇವನೆ ಮಾಡುವುದ್ರಿಂದ ಸಾಕಷ್ಟು ಪ್ರಯೋಜನವಿದೆ. ನೆಲ್ಲಿಕಾಯಿ ವಿಟಮಿನ್ ಸಿ ಯ ಅತ್ಯುತ್ತಮ ಮೂಲವಾಗಿದೆ. ಇದು ನೈಸರ್ಗಿಕ ರೀತಿಯಲ್ಲಿ ರೋಗ ನಿರೋಧಕ ಶಕ್ತಿಯನ್ನು ಬಲಪಡಿಸಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿಯನ್ನು ನಿಯಮಿತವಾಗಿ ತಿನ್ನುವುದು ಬಹಳ ಪ್ರಯೋಜನಕಾರಿ. ಇದು ಬಿಳಿ ರಕ್ತ ಕಣಗಳ ಉತ್ಪಾದನೆಯನ್ನು ಹೆಚ್ಚಿಸುತ್ತದೆ. ಇದು ಸೋಂಕುಗಳ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ನೆಲ್ಲಿಕಾಯಿಯಲ್ಲಿ ಕ್ಯಾಲ್ಸಿಯಂ, ಕಬ್ಬಿಣ, ರಂಜಕ, ವಿಟಮಿನ್ ಬಿ ಕಾಂಪ್ಲೆಕ್ಸ್, ಪ್ರೋಟೀನ್ ಗಳಿವೆ. ರೋಗನಿರೋಧಕ ಶಕ್ತಿಯನ್ನು ಬಲಪಡಿಸುವುದರ ಜೊತೆಗೆ, ನೆಲ್ಲಿಕಾಯಿ ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ದೇಹದಲ್ಲಿ ಸಂಗ್ರಹವಾಗಿರುವ ವಿಷವನ್ನು ಹೊರಹಾಕಲು ಸಹಾಯ ಮಾಡುತ್ತದೆ.

ನುಗ್ಗೆಕಾಯಿ ಎಲೆಗಳಲ್ಲಿ ವಿಟಮಿನ್ ಎ, ಬಿ, ಸಿ, ಕಬ್ಬಿಣ, ಮೆಗ್ನೀಸಿಯಮ್, ಕ್ಯಾಲ್ಸಿಯಂ ಮತ್ತು ಪೊಟ್ಯಾಸಿಯಮ್ ಇದೆ. ಉತ್ಕರ್ಷಣ ನಿರೋಧಕ, ಉರಿಯೂತದ ಮತ್ತು ಬ್ಯಾಕ್ಟೀರಿಯಾ ವಿರೋಧಿ ಗುಣಗಳನ್ನು ಹೊಂದಿದೆ. ಇದು ದೇಹದ ಪ್ರತಿರಕ್ಷಣಾ ವ್ಯವಸ್ಥೆಯನ್ನು ಬಲಪಡಿಸುತ್ತದೆ. ರೋಗಗಳಿಂದ ನಮ್ಮನ್ನು ದೂರವಿರಿಸುತ್ತದೆ. ನುಗ್ಗೆ ಎಲೆಗಳು ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ. ಮೂಳೆಗಳು ಮತ್ತು ಕೀಲುಗಳನ್ನು ಬಲಪಡಿಸುತ್ತದೆ. ಉತ್ತಮ ನಿದ್ರೆಗೆ ಸಹಾಯ ಮಾಡುತ್ತದೆ.

ಒಂದು ನೆಲ್ಲಿಕಾಯಿ ತೆಗೆದುಕೊಳ್ಳಿ. ಅದಕ್ಕೆ ಒಂದು ಚಮಚ ನುಗ್ಗೆ ಎಲೆ ಪುಡಿ ಅಥವಾ 8-10 ನುಗ್ಗೆ ಎಲೆಯನ್ನು ಹಾಕಿ, ನೀರು ಹಾಕಿ ಮಿಕ್ಸಿ ಮಾಡಿ. ನಂತ್ರ ಜರಡಿ ಹಿಡಿದು ಬೆಳಿಗ್ಗೆ ಟೀ, ಕಾಫಿ ಬದಲು ಇದನ್ನು ಸೇವನೆ ಮಾಡಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read