HomeKarnatakaBIG NEWS : ಈ ಬಾರಿ ಅದ್ಧೂರಿ ‘ಮೈಸೂರು ದಸರಾ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ...

BIG NEWS : ಈ ಬಾರಿ ಅದ್ಧೂರಿ ‘ಮೈಸೂರು ದಸರಾ’ ಆಚರಿಸಲು ರಾಜ್ಯ ಸರ್ಕಾರ ನಿರ್ಧಾರ |Mysore Dasara 2024

ಬೆಂಗಳೂರು : ಈ ಬಾರಿ ನಾಡಹಬ್ಬ ಮೈಸೂರು ದಸರಾವನ್ನು ವಿಜೃಂಭಣೆಯಿಂದ ಆಚರಿಸಲು ನಿರ್ಧರಿಸಲಾಗಿದೆ. ಅಕ್ಟೋಬರ್ 3 ರಂದು ಚಾಮುಂಡಿ ಬೆಟ್ಟದಲ್ಲಿ ಬೆಳಗ್ಗೆ 9.15ಕ್ಕೆ ದಸರಾ ಮಹೋತ್ಸವಕ್ಕೆ ಚಾಲನೆ ದೊರೆಯಲಿದೆ. ಉದ್ಘಾಟನೆ ದಿನವೇ ವಸ್ತು ಪ್ರದರ್ಶನ ಕೂಡ ಆರಂಭಿಸಲು ಸೂಚಿಸಲಾಗಿದೆ.

ಆಗಸ್ಟ್ 21ರಂದು ಬೆಳಗ್ಗೆ 10.10 ಗಂಟೆಯಿಂದ ಹುಣಸೂರು ತಾಲೂಕಿನ ವೀರನಹೊಸಹಳ್ಳಿಯಲ್ಲಿ ಗಜಪೂಜೆ ಮಾಡಲಾಗುವುದು. ಅಕ್ಟೋಬರ್ 3 ರಿಂದ 12ರ ವರೆಗೆ ದಸರಾ ಉತ್ಸವ ನಡೆಯಲಿದೆ. ಸಂಪ್ರದಾಯದಂತೆ 9 ದಿನ ಕಾರ್ಯಕ್ರಮಗಳು ಹಾಗೂ 10 ನೇ ದಿನ ಜಂಬೂ ಸವಾರಿಗೆ ಏರ್ಪಾಡು ಮಾಡಲಾಗುತ್ತದೆ. ಅಕ್ಟೋಬರ್ 12 ರಂದು ಮಧ್ಯಾಹ್ನ 1.41 ರಿಂದ 2.10 ಗಂಟೆಯವರೆಗೆ ಜಂಬೂ ಸವಾರಿ, ನಂದಿ ಧ್ವಜ ಪೂಜೆ ಹಾಗೂ ಸಂಜೆ 4 ಗಂಟೆಯಿಂದ ಪುಷ್ಪಾರ್ಚನೆ ನಡೆಯಲಿದೆ.

ಈ ಬಾರಿಯ ದಸರಾದಲ್ಲಿ ವಿಶೇಷತೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಯುವ ದಸರಾ, ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸ್ಥಳೀಯ ಕಲೆ, ಪ್ರತಿಭೆ ಗಳಿಗೆ ಹೆಚ್ಚಿನ ಪ್ರಾಶಸ್ತ್ಯ ನೀಡಬೇಕು. ಗೋಲ್ಡ್ ಕಾರ್ಡ್ ಗಳನ್ನು ಮುಂಚಿತವಾಗಿ ಮಾಡಬೇಕು. ಪಾರ್ಕಿಂಗ್, ಟ್ರಾಫಿಕ್, ಬಂದೋಬಸ್ತ್ ಕಡೆಗೆ ಪೊಲೀಸ್ ಇಲಾಖೆ ಹೆಚ್ಚಿನ ಗಮನ ಕೊಡಬೇಕು. . ಏರ್ ಶೋಗೆ ಕೇಂದ್ರ ಸಚಿವ ರಾಜನಾಥ್ ಸಿಂಗ್ ಅವರಿಗೆ ಪತ್ರ ಬರೆದು ಮನವಿ ಮಾಡಲಾಗುವುದು. ಸ್ವಲ್ಪ ಹೆಚ್ಚಿನ ಸಮಯ ಏರ್ ಶೋ ನಡೆಸಲೂ ವಿನಂತಿಸಲಾಗುವುದು. ಅಧಿಕಾರಿಗಳು ಈಗಿನಿಂದಲೇ ಸಿದ್ಧತೆ ಆರಂಭಿಸಬೇಕು. ಮಾಮೂಲು ಹಳೆ ಪದ್ಧತಿಗಳಲ್ಲೇ ಆಯೋಜನೆ ಮಾಡುವುದಕ್ಕಿಂತ ಈ ಬಾರಿಯ ದಸರಾದಲ್ಲಿ ವಿಶೇಷತೆ ಇರಲಿ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular