HomeLatest NewsBREAKING : ಈ ಬಾರಿ IPL ಉದ್ಘಾಟನಾ ಸಮಾರಂಭ ರದ್ದು; 'BCCI' ನಿಂದ ಮಹತ್ವದ...

BREAKING : ಈ ಬಾರಿ IPL ಉದ್ಘಾಟನಾ ಸಮಾರಂಭ ರದ್ದು; ‘BCCI’ ನಿಂದ ಮಹತ್ವದ ನಿರ್ಧಾರ |IPL 2026

ಬೆಂಗಳೂರು :  ಹದಿನೆಂಟನೇ ಆವೃತ್ತಿಯ ಐಪಿಎಲ್ ಚಾಂಪಿಯನ್ ಆಗಿ ಸಂಭ್ರಮಿಸಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಂಡದ ತವರು ನೆಲದಲ್ಲೇ ಈ ಬಾರಿ ಐಪಿಎಲ್ 2026ರ ಉದ್ಘಾಟನಾ ಪಂದ್ಯ ನಡೆಯಲಿದ್ದರೂ, ಕ್ರಿಕೆಟ್ ಅಭಿಮಾನಿಗಳಿಗೆ ಬಿಸಿಸಿಐ (BCCI) ಒಂದು ಬೇಸರದ ಸುದ್ದಿ ನೀಡಿದೆ.

ಹೌದು.   ಬಹುನಿರೀಕ್ಷಿತ ಐಪಿಎಲ್ 2026ರ (IPL 19ನೇ ಆವೃತ್ತಿ) ಉದ್ಘಾಟನಾ ಸಮಾರಂಭವನ್ನು ಈ ಬಾರಿ ನಡೆಸದಿರಲು ಬಿಸಿಸಿಐ (BCCI) ನಿರ್ಧರಿಸಿದೆ. ಮಾರ್ಚ್ 28ರಂದು ಬೆಂಗಳೂರಿನ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಹಾಲಿ ಚಾಂಪಿಯನ್ ಆರ್‌ಸಿಬಿ ಮತ್ತು ಸನ್‌ರೈಸರ್ಸ್ ಹೈದರಾಬಾದ್ ನಡುವೆ ಮೊದಲ ಪಂದ್ಯ ನಡೆಯಲಿದ್ದರೂ, ಯಾವುದೇ ಅದ್ಧೂರಿ ಸಮಾರಂಭ ಇರುವುದಿಲ್ಲ. ಕಳೆದ ವರ್ಷ ಆರ್‌ಸಿಬಿಯ ವಿಜಯೋತ್ಸವದ ವೇಳೆ ಬೆಂಗಳೂರಿನಲ್ಲಿ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಮೃತಪಟ್ಟಿದ್ದ ದುರಂತದ ಹಿನ್ನೆಲೆಯಲ್ಲಿ, ಮೃತರ ಗೌರವಾರ್ಥವಾಗಿ ಬಿಸಿಸಿಐ ಈ ಮಹತ್ವದ ನಿರ್ಧಾರ ಕೈಗೊಂಡಿದೆ.

ಕಳೆದ ವರ್ಷ (2025) ಆರ್‌ಸಿಬಿ ಚೊಚ್ಚಲ ಐಪಿಎಲ್ ಪ್ರಶಸ್ತಿ ಗೆದ್ದ ಸಂಭ್ರಮದಲ್ಲಿ ಬೆಂಗಳೂರಿನಲ್ಲಿ ಆಯೋಜಿಸಲಾಗಿದ್ದ ವಿಜಯೋತ್ಸವದ ಮೆರವಣಿಗೆಯ ವೇಳೆ ಸಂಭವಿಸಿದ ಭೀಕರ ಕಾಲ್ತುಳಿತದಲ್ಲಿ 11 ಜನರು ಪ್ರಾಣ ಕಳೆದುಕೊಂಡಿದ್ದರು. ಈ ದುರಂತದಲ್ಲಿ ಮೃತಪಟ್ಟವರ ಗೌರವಾರ್ಥವಾಗಿ ಮತ್ತು ಸಂವೇದನಾಶೀಲತೆಯ ದೃಷ್ಟಿಯಿಂದ ಈ ಬಾರಿ ಉದ್ಘಾಟನಾ ಸಮಾರಂಭವನ್ನು ಆಯೋಜಿಸದಿರಲು ಬಿಸಿಸಿಐ ತೀರ್ಮಾನಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಉದ್ಘಾಟನಾ ಪಂದ್ಯ: ಮಾರ್ಚ್ 28, ಸಂಜೆ 7:30ಕ್ಕೆ, ಆರ್‌ಸಿಬಿ vs ಸನ್‌ರೈಸರ್ಸ್ ಹೈದರಾಬಾದ್ (ಬೆಂಗಳೂರು).

ಸಮಾರೋಪ ಸಮಾರಂಭ: ಉದ್ಘಾಟನಾ ಕಾರ್ಯಕ್ರಮ ಇಲ್ಲದಿದ್ದರೂ, ಮೇ 31ರಂದು ನಡೆಯಲಿರುವ ಫೈನಲ್ ಪಂದ್ಯದ ವೇಳೆ ಸಮಾರೋಪ ಸಮಾರಂಭ ನಡೆಸುವ ಸಾಧ್ಯತೆಯಿದೆ ಎಂದು ಬಿಸಿಸಿಐ ಕಾರ್ಯದರ್ಶಿ ದೇವ್‌ಜಿತ್ ಸೈಕಿಯಾ ತಿಳಿಸಿದ್ದಾರೆ.

ಹಿಂದಿನ ಉದಾಹರಣೆ: 2019ರಲ್ಲೂ ಪುಲ್ವಾಮಾ ದಾಳಿಯ ಹುತಾತ್ಮ ಸೈನಿಕರ ಗೌರವಾರ್ಥವಾಗಿ ಐಪಿಎಲ್ ಉದ್ಘಾಟನಾ ಸಮಾರಂಭವನ್ನು ರದ್ದುಗೊಳಿಸಿ, ಆ ಹಣವನ್ನು ಸೈನಿಕರ ಕುಟುಂಬಗಳಿಗೆ ನೀಡಲಾಗಿತ್ತು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular