HomeLatest Newsಈ ಸಲ ಕೂಡ ಕಪ್ ನಮ್ಮದೇ! : WPL ಚಾಂಪಿಯನ್ RCB ಮಹಿಳಾ ತಂಡಕ್ಕೆ ಸಿಎಂ...

ಈ ಸಲ ಕೂಡ ಕಪ್ ನಮ್ಮದೇ! : WPL ಚಾಂಪಿಯನ್ RCB ಮಹಿಳಾ ತಂಡಕ್ಕೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಅಭಿನಂದನೆ

ವಡೋದರಾದಲ್ಲಿ ನಡೆದ ಡಬ್ಲ್ಯೂ.ಪಿ.ಎಲ್.ನ 4ನೇ ಆವೃತ್ತಿಯ ಫೈನಲ್ ನಲ್ಲಿ ಆರ್.ಸಿ.ಬಿ. ತಂಡ ಡೆಲ್ಲಿ ಕ್ಯಾಪಿಟಲ್ ವಿರುದ್ಧ ದಾಖಲೆಯ 204 ರನ್ ಬೆನ್ನತ್ತಿ ಗೆದ್ದು ಚಾಂಪಿಯನ್ ಆಗಿದೆ. 2024ರ ವುಮೆನ್ಸ್ ಪ್ರೀಮಿಯರ್ ಲೀಗ್ ಮೂಲಕ ಚೊಚ್ಚಲ ಟ್ರೋಫಿಗೆ ಮುತ್ತಿಟ್ಟಿದ್ದ ಆರ್.ಸಿ.ಬಿ. ಮಹಿಳಾ ತಂಡ ಹ್ಯಾಟ್ರಿಕ್ ಟ್ರೋಫಿ ಮುಡಿಗೇರಿಸಿಕೊಂಡಿದೆ. ವಿಜೇತ ತಂಡವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅಭಿನಂದಿಸಿದ್ದಾರೆ.

ಮತ್ತೊಮ್ಮೆ ಆರ್.ಸಿ.ಬಿ ಮಹಿಳೆಯರ ತಂಡ ಡಬ್ಲ್ಯೂ.ಪಿ.ಎಲ್ ಟ್ರೋಫಿಯನ್ನು ಮುಡಿಗೇರಿಸಿಕೊಂಡಿದೆ. ಇಡೀ ಪಂದ್ಯಾಕೂಟದುದ್ದಕ್ಕೂ ಉತ್ಕೃಷ್ಟ ಪ್ರದರ್ಶನ ನೀಡುತ್ತಾ ಬಂದ ನಮ್ಮ ಆರ್.ಸಿ.ಬಿ. ತಂಡ, ಇಂದಿನ ಫೈನಲ್ ಪಂದ್ಯದಲ್ಲಿ ಡೆಲ್ಲಿ ತಂಡವನ್ನು ಸೋಲಿಸಿ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ನೋಡಿ ಖುಷಿಯಾಯಿತು. ಸಂಘಟಿತ ಹೋರಾಟದ ಮೂಲಕ ಟ್ರೋಫಿ ಗೆದ್ದ ನಮ್ಮ ಆರ್.ಸಿ.ಬಿ ಯ ಹೆಣ್ಣುಮಕ್ಕಳಿಗೆ ಅಭಿನಂದನೆಗಳು. ಪಂದ್ಯದ ಕೊನೆಯವರೆಗೂ ಗೆಲುವಿಗಾಗಿ ಸಾಕಷ್ಟು ಸೆಣೆಸಿದ ಡೆಲ್ಲಿ ತಂಡದ ಆಟ ಕೂಡ ಶ್ಲಾಘನೀಯ ಎಂದು ಸಿಎಂ ತಿಳಿಸಿದ್ದಾರೆ.

ಆರ್‌ಸಿಬಿ ಮತ್ತೊಮ್ಮೆ ಡಬ್ಲ್ಯೂಪಿಎಲ್ ಟ್ರೋಫಿಯನ್ನು ಎತ್ತಿ ಹಿಡಿದಿದೆ!

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಡಬ್ಲ್ಯೂಪಿಎಲ್ ಪ್ರಶಸ್ತಿಯನ್ನು ಗೆದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡಕ್ಕೆ ಹೃತ್ಪೂರ್ವಕ ಅಭಿನಂದನೆಗಳು. ತಂಡವು ಆತ್ಮವಿಶ್ವಾಸ, ಶಿಸ್ತು ಮತ್ತು ಏಕತೆಯನ್ನು ಪ್ರದರ್ಶಿಸಿತು, ಫೈನಲ್ ಅನ್ನು ಉತ್ತಮ ಶಾಂತತೆಯಿಂದ ನಿರ್ವಹಿಸಿತು. ಫೈನಲ್‌ಗೆ ನಿಜವಾಗಿಯೂ ಸೂಕ್ತವಾದ ಪಂದ್ಯ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular