HomeKarnatakaಈ ಬಾರಿ 'ಬಿಗ್ ಬಾಸ್' ಕನ್ನಡ 13ಕ್ಕೆ ಯಾರೆಲ್ಲ ಎಂಟ್ರಿ ? ಸಂಭಾವ್ಯ ಸ್ಪರ್ಧಿಗಳ ಪಟ್ಟಿ...

ಈ ಬಾರಿ ‘ಬಿಗ್ ಬಾಸ್’ ಕನ್ನಡ 13ಕ್ಕೆ ಯಾರೆಲ್ಲ ಎಂಟ್ರಿ ? ಸಂಭಾವ್ಯ ಸ್ಪರ್ಧಿಗಳ ಪಟ್ಟಿ ವೈರಲ್ !

ಬೆಂಗಳೂರು: ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭಕ್ಕೆ ಕ್ಷಣಗಣನೆ ಶುರುವಾಗಿದ್ದು, ಈ ಬಾರಿ ದೊಡ್ಮನೆಗೆ ಯಾರೆಲ್ಲ ಎಂಟ್ರಿ ಕೊಡಲಿದ್ದಾರೆ ಎಂಬ ಕುತೂಹಲ ಅಭಿಮಾನಿಗಳಲ್ಲಿ ಹೆಚ್ಚಾಗಿದೆ. ಈಗಾಗಲೇ ಸಾಮಾನ್ಯ ಸ್ಪರ್ಧಿಗಳ ಆಯ್ಕೆ ಪ್ರಕ್ರಿಯೆ ನಡೆದಿದ್ದು, ಇದರ ನಡುವೆ ಸಂಭಾವ್ಯ ಸ್ಪರ್ಧಿಗಳ ಪಟ್ಟಿಯೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಆದರೆ ಈ ಪಟ್ಟಿಯನ್ನು ವಾಹಿನಿ ಅಥವಾ ಕಾರ್ಯಕ್ರಮದ ಆಯೋಜಕರು ಅಧಿಕೃತವಾಗಿ ದೃಢಪಡಿಸಿಲ್ಲ.

ಸಂಭಾವ್ಯ ಸ್ಪರ್ಧಿಗಳ ಪಟ್ಟಿಯಲ್ಲಿ ಯಾರಿದ್ದಾರೆ?

ವೈರಲ್ ಆಗಿರುವ ಪಟ್ಟಿಯಲ್ಲಿ ನಟ ಸುನೀಲ್ ರಾವ್, ಮಜಾ ಭಾರತ ಖ್ಯಾತಿಯ ಶಿವು, ಹಳ್ಳಿ ಪವರ್ ವಿಜೇತೆ ರಗಡ್ ರಶ್ಮಿ, ಕೋಳಿ ರಮ್ಯಾ ಹಾಗೂ ಯೂಟ್ಯೂಬರ್ ಶಿವಪುತ್ರ ಅವರ ಹೆಸರುಗಳು ಪ್ರಮುಖವಾಗಿ ಕೇಳಿಬರುತ್ತಿವೆ. ಇವರು ವಿಭಿನ್ನಕ್ಷೇತ್ರಗಳಲ್ಲಿ ಜನಪ್ರಿಯತೆ ಗಳಿಸಿರುವ ಕಾರಣ ಬಿಗ್ ಬಾಸ್ ಮನೆಗೆ ಬಂದರೆ ಮನರಂಜನೆ ಮತ್ತಷ್ಟು ಹೆಚ್ಚಲಿದೆ ಎಂಬ ಅಭಿಪ್ರಾಯ ವ್ಯಕ್ತವಾಗುತ್ತಿದೆ.

ಸಾಮಾನ್ಯರಿಗೂ ಅವಕಾಶ

ಈ ಬಾರಿ ಬಿಗ್ ಬಾಸ್ ಕನ್ನಡ ಸೀಸನ್ 13ರ ವಿಶೇಷವೆಂದರೆ ಸಾಮಾನ್ಯರಿಗೂ ಅವಕಾಶ ನೀಡಲಾಗಿದೆ. ವಿಡಿಯೊಗಳ ಮೂಲಕ ಅರ್ಜಿ ಆಹ್ವಾನಿಸಿ ಈಗಾಗಲೇ ಆಡಿಷನ್ ಪ್ರಕ್ರಿಯೆ ನಡೆಸಲಾಗಿದೆ. ಹೀಗಾಗಿ ಸೆಲೆಬ್ರಿಟಿಗಳ ಜೊತೆಗೆ ಕೆಲವು ಹೊಸ ಮುಖಗಳೂ ದೊಡ್ಮನೆ ಪ್ರವೇಶಿಸುವ ಸಾಧ್ಯತೆ ಇದೆ.ಸದ್ಯ ವೈರಲ್ ಆಗಿರುವ ಹೆಸರುಗಳು ಕೇವಲ ಊಹಾಪೋಹಗಳಾಗಿದ್ದು, ಅಂತಿಮ ಸ್ಪರ್ಧಿಗಳ ಪಟ್ಟಿಯನ್ನು ಕಾರ್ಯಕ್ರಮದ ಪ್ರಸಾರಕ್ಕೂ ಮುನ್ನ ವಾಹಿನಿಯೇ ಅಧಿಕೃತವಾಗಿ ಪ್ರಕಟಿಸಲಿದೆ. ಅಷ್ಟರವರೆಗೆ ಈ ಪಟ್ಟಿಯನ್ನು ಸಂಭಾವ್ಯ ಅಭ್ಯರ್ಥಿಗಳ ಪಟ್ಟಿಯೆಂದು ಮಾತ್ರ ಪರಿಗಣಿಸಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಬಾರಿಯ ವಿಶೇಷತೆ ಏನು?

ಈ ಬಾರಿ ಬಿಗ್ ಬಾಸ್ ಕನ್ನಡ 13ರಲ್ಲಿ ಸೆಲೆಬ್ರಿಟಿಗಳ ಜೊತೆಗೆ ಸಾಮಾನ್ಯ ಸ್ಪರ್ಧಿಗಳಿಗೂ ಅವಕಾಶ ನೀಡಲಾಗಿದೆ. ಇದರಿಂದ ಮನೆಯೊಳಗಿನ ಸ್ಪರ್ಧೆ ಇನ್ನಷ್ಟು ಕುತೂಹಲಕರವಾಗಲಿದೆ ಎನ್ನುವ ನಿರೀಕ್ಷೆ ಇದೆ. ಈಗಾಗಲೇ ಕಾಮನರ್‌ಗಳಿಗಾಗಿ ಆನ್‌ಲೈನ್ ಆಡಿಷನ್ ಪ್ರಕ್ರಿಯೆಯನ್ನೂ ಆರಂಭಿಸಲಾಗಿತ್ತು.

ಅಭಿಮಾನಿಗಳಲ್ಲಿ ಹೆಚ್ಚಿದ ನಿರೀಕ್ಷೆ

ಪ್ರತಿ ವರ್ಷವೂ ಬಿಗ್ ಬಾಸ್ ಆರಂಭಕ್ಕೂ ಮುನ್ನ ಹಲವು ಸಂಭಾವ್ಯ ಪಟ್ಟಿಗಳು ವೈರಲ್ ಆಗುವುದು ಸಾಮಾನ್ಯ. ಈ ಬಾರಿಯೂ ಅದೇ ರೀತಿ ಹಲವು ಹೆಸರುಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ ಅಧಿಕೃತ ಘೋಷಣೆ ಹೊರಬರುವವರೆಗೂ ಯಾವುದೇ ಪಟ್ಟಿಯನ್ನು ಅಂತಿಮ ಎಂದು ಪರಿಗಣಿಸಲಾಗುವುದಿಲ್ಲ. ಬಿಗ್ ಬಾಸ್ ಕನ್ನಡ ಸೀಸನ್ 13 ಆರಂಭಕ್ಕೂ ಮುನ್ನವೇ ಸಾಕಷ್ಟು ಕುತೂಹಲ ಸೃಷ್ಟಿಯಾಗಿದೆ. ಯಾರು ನಿಜವಾಗಿಯೂ ಬಿಗ್ ಬಾಸ್ ಮನೆಗೆ ಪ್ರವೇಶಿಸುತ್ತಾರೆ ಎಂಬುದನ್ನು ತಿಳಿಯಲು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಅಧಿಕೃತ ಸ್ಪರ್ಧಿಗಳ ಪಟ್ಟಿ ಪ್ರಕಟವಾದ ಬಳಿಕವೇ ಎಲ್ಲ ಊಹಾಪೋಹಗಳಿಗೆ ತೆರೆ ಬೀಳಲಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

LEAVE A REPLY

Please enter your comment!
Please enter your name here

Most Popular