ಬೆಂಗಳೂರಿನ ಬಿಟಿಎಂ ಲೇಔಟ್ ಪ್ರದೇಶದಲ್ಲಿ ನಡೆದ ಲೈಂಗಿಕ ಕಿರುಕುಳದ ಪ್ರಕರಣವೊಂದು ಬೆಳಕಿಗೆ ಬಂದಿದೆ. ಏಪ್ರಿಲ್ 3ರಂದು ಸುಮಾರು 1:55ರ ಸುಮಾರಿಗೆ ಓರ್ವ ವ್ಯಕ್ತಿಯು ಮಹಿಳೆಯನ್ನು ಹಿಂಬಾಲಿಸಿ ಲೈಂಗಿಕ ಕಿರುಕುಳ ನೀಡಿದ್ದು, ಈ ಸಂಪೂರ್ಣ ಘಟನೆ ಸಿಸಿ ಟಿವಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಈ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿವೆ.
ವಿಡಿಯೋದಲ್ಲಿ, ಆರೋಪಿಯು ಇಬ್ಬರು ಮಹಿಳೆಯರನ್ನು ಹಿಂಬಾಲಿಸಿಕೊಂಡು ಬರುತ್ತಿರುವುದು ಸ್ಪಷ್ಟವಾಗಿ ಕಾಣಿಸುತ್ತದೆ. ನಂತರ, ಆತ ಇದ್ದಕ್ಕಿದ್ದಂತೆ ಮುಂದೆ ನುಗ್ಗಿ ಅವರಲ್ಲಿ ಒಬ್ಬ ಮಹಿಳೆಯನ್ನು ಅನುಚಿತವಾಗಿ ಸ್ಪರ್ಶಿಸಿ ಸ್ಥಳದಿಂದ ಪರಾರಿಯಾಗುತ್ತಾನೆ. ಈ ಅನಿರೀಕ್ಷಿತ ಘಟನೆಯಿಂದ ಬೆಚ್ಚಿಬಿದ್ದ ಮಹಿಳೆಯರು ಆ ಪ್ರದೇಶದಿಂದ ತಕ್ಷಣವೇ ಹೊರಟು ಹೋಗುತ್ತಾರೆ.
ಈ ಘಟನೆಗೆ ಸಂಬಂಧಿಸಿದಂತೆ, ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ ಅಪರಿಚಿತ ವ್ಯಕ್ತಿಯ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 354ಬಿ (ಮಹಿಳೆಯನ್ನು ನಿರ್ವಸ್ತ್ರಗೊಳಿಸುವ ಉದ್ದೇಶದಿಂದ ಹಲ್ಲೆ ಅಥವಾ ಬಲ ಪ್ರಯೋಗ) ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಸ್ಥಳೀಯ ನಿವಾಸಿಯೊಬ್ಬರು ಈ ದೂರು ದಾಖಲಿಸಿದ್ದಾರೆ.
ಪೊಲೀಸ್ ಮೂಲಗಳ ಪ್ರಕಾರ, ಸಂತ್ರಸ್ತ ಮಹಿಳೆ ಇನ್ನೂ ಯಾವುದೇ ಔಪಚಾರಿಕ ದೂರು ದಾಖಲಿಸದಿದ್ದರೂ, ತನಿಖೆಯನ್ನು ಪ್ರಾರಂಭಿಸಲಾಗಿದೆ. ಆರೋಪಿಯನ್ನು ಗುರುತಿಸಲು ಪೊಲೀಸರು ಆ ಪ್ರದೇಶದ ಮತ್ತು ಸುತ್ತಮುತ್ತಲಿನ ಹಲವು ಸಿಸಿ ಟಿವಿ ಕ್ಯಾಮೆರಾಗಳ ದೃಶ್ಯಾವಳಿಗಳನ್ನು ಪರಿಶೀಲಿಸುತ್ತಿದ್ದಾರೆ. ಒಂದು ವೇಳೆ ಸಂತ್ರಸ್ತೆಯ ದೂರು ಬರದಿದ್ದಲ್ಲಿ, ಸ್ವಯಂ ಪ್ರೇರಿತ ದೂರು ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯು ಬೆಂಗಳೂರಿನಲ್ಲಿ ಮಹಿಳೆಯರ ಸುರಕ್ಷತೆಯ ಕುರಿತು ಮತ್ತೊಮ್ಮೆ ಕಳವಳ ಮೂಡಿಸಿದೆ.
A woman was molested in #Bengaluru’s BTM Layout on April 4. CCTV footage shows a man following two women, groping one, and fleeing. Police launch an investigation. pic.twitter.com/AMuM2nIWmP
— Indian News Network (@INNChannelNews) April 6, 2025