ಎಪಿಎಲ್ ಗೆ ಬದಲಾದ ಅರ್ಹರಿಗೆ ಮತ್ತೆ ಬಿಪಿಎಲ್ ಕಾರ್ಡ್ ಪಡೆಯಲು ಅವಕಾಶ

ಬೆಂಗಳೂರು: ಅನರ್ಹ ಬಿಪಿಎಲ್ ಕಾರ್ಡ್ ದಾರರನ್ನು ಪತ್ತೆ ಮಾಡಿ ಎಪಿಎಲ್ ಕಾರ್ಡ್ ನೀಡಲು ಆಹಾರ ಇಲಾಖೆ ಮುಂದಾಗಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಇಲಾಖೆಯ ಪ್ರಸ್ತಾವಕ್ಕೆ ಅನುಮೋದನೆ ನೀಡಿದ್ದಾರೆ.

ರಾಜ್ಯದಲ್ಲಿ 7,76,206 ಪಡಿತರ ಚೀಟಿಗಳು ಅನರ್ಹವೆಂದು ಕೇಂದ್ರ ಸರ್ಕಾರ ಗುರುತಿಸಿದೆ. ರಾಜ್ಯ ಸರ್ಕಾರದ ಕುಟುಂಬ ತಂತ್ರಾಂಶದ ಪ್ರಕಾರ 13,87,651 ಅನರ್ಹ ಪಡಿತರ ಚೀಟಿಗಳಿವೆ. ಇಂತಹ ಅನರ್ಹ ಚೀಟಿಗಳನ್ನು ಬಿಪಿಎಲ್ ಬದಲಿಗೆ ಎಪಿಎಲ್ ಆಗಿ ಪರಿವರ್ತಿಸಲಾಗುವುದು. ಒಂದು ವೇಳೆ ಅರ್ಹರ ಕಾರ್ಡ್ ಎಪಿಎಲ್ ಗೆ ಬದಲಾಗಿದ್ದಲ್ಲಿ 45 ದಿನದೊಳಗೆ ಅಗತ್ಯ ದಾಖಲೆ ಸಹಿತ ತಹಶೀಲ್ದಾರ್ ಗೆ ಮನವಿ ಸಲ್ಲಿಸಬೇಕು. ದಾಖಲೆಗಳ ಪರಿಶೀಲಿಸಿ ಅರ್ಹರಿದ್ದಲ್ಲಿ ಅಂತವರಿಗೆ ಬಿಪಿಎಲ್ ಕಾರ್ಡ್ ನೀಡಲಾಗುವುದು.

ಹೊಸದಾಗಿ ಪಡಿತರ ಚೀಟಿಗೆ ಈಗಾಗಲೇ ಸಲ್ಲಿಕೆಯದ 2.96 ಲಕ್ಷ ಅರ್ಜಿ ವಿಲೇವಾರಿ ಮಾಡುವವರೆಗೆ ಬಿಪಿಎಲ್ ಗೆ ಹೊಸದಾಗಿ ಅರ್ಜಿ ಆಹ್ವಾನಿಸಬಾರದು ಎಂದು ಹೇಳಲಾಗಿದೆ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read