ಬೆಂಗಳೂರು : ‘ನಿನ್ನೆ ಕಪ್ ಎತ್ತಿ ಫೋಟೋ ತೆಗೆಸಿಕೊಂಡು ಸಂಭ್ರಮಿಸಿದವರು ಇವತ್ತು ಸತ್ತ ಅಮಾಯಕರ ಶವಕ್ಕೆ ಹೆಗಲು ಕೊಡಲು ಬರಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ನಿನ್ನೆ ಕಪ್ ಎತ್ತಿ ಫೋಟೋ ತೆಗೆಸಿಕೊಂಡು ಸಂಭ್ರಮ ಪಟ್ಟವರು ಇವತ್ತು ಸತ್ತ ಅಮಾಯಕರ ಶವಕ್ಕೆ ಹೆಗಲು ಕೊಡಲು ಬರುವುದಿಲ್ಲ. ನಿನ್ನೆ ವಿಮಾನ ನಿಲ್ದಾಣಕ್ಕೆ ಹೋಗಿ ಸೆಲ್ಫಿ ತೆಗೆಸಿಕೊಂಡು ಖುಷಿ ಪಟ್ಟವರು ಇವತ್ತು ಸತ್ತವರ ಮನೆಗೆ ಹೋಗಿ ಕಣ್ಣೀರು ಹಾಕುವುದಿಲ್ಲ. ನಿನ್ನೆ ಕ್ರಿಕೆಟ್ ಆಟಗಾರರಿಗೆ ಪೇಟ ತೊಡಿಸಿ ಹಾರ ಹಾಕಿ ಸನ್ಮಾನ ಮಾಡಿದವರು ಇವತ್ತು ಸತ್ತವರ ಸಮಾಧಿಗೆ ಮಣ್ಣು ಹಾಕಲೂ ಬರುವುದಿಲ್ಲ. ಈ ಹೃದಯಹೀನ ಕಾಂಗ್ರೆಸ್ ಸರ್ಕಾರದಲ್ಲಿ ಜನಸಾಮಾನ್ಯರ ಜೀವಕ್ಕೆ ಬೆಲೆಯೇ ಇಲ್ಲ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ನಿಮ್ಮ ಕೈ ಕೆಳಗೆ ಕೆಲಸ ಮಾಡುವ, ನಿಮಗೆ ರಿಪೋರ್ಟ್ ಮಾಡಿಕೊಳ್ಳುವ ಜಿಲ್ಲಾಧಿಕಾರಿಗಳು ತನಿಖೆ ಮಾಡಿ ಏನು ಗುಡ್ಡೆ ಹಾಕುತ್ತಾರೆ ಸಿಎಂ ಸಿದ್ದರಾಮಯ್ಯನವರೇ? ಕಾರ್ಯಕ್ರಮದ ಬಗ್ಗೆ ಯೋಚನೆ ಮಾಡಿ, ಅದರ ರೂಪುರೇಷೆ ನಿರ್ಧರಿಸಿ, ಪೂರ್ವಸಿದ್ಧತೆ ಮಾಡಿಕೊಳ್ಳಬೇಕಾದ ಜಿಲ್ಲಾಧಿಕಾರಿಗಳೇ ಸರ್ಕಾರದ ತಪ್ಪುಗಳು, ಲೋಪದೋಷಗಳು, ಎಡವಟ್ಟುಗಳು ಬಗ್ಗೆ ಪ್ರಾಮಾಣಿಕವಾಗಿ ತನಿಖೆ ಮಾಡಿ ವರದಿ ನೀಡುತ್ತಾರೆ ಅಂದರೆ ಅದನ್ನು ನಂಬಲು ಸಾಧ್ಯವೇ ಮುಖ್ಯಮಂತ್ರಿಗಳೇ? ಜನಸಾಮಾನ್ಯರಿಗೆ ವಂಚನೆ ಮಾಡಿ ಹೆಣಗಳನ್ನ ಉರುಳಿಸಿದ್ದಾಯ್ತು, ಈಗ ನಿಮಗೆ ನೀವೇ ಆತ್ಮ ವಂಚನೆ ಮಾಡಿಕೊಂಡು ಇನ್ನೊಂದು ಪಾಪ ಯಾಕೆ ಕಟ್ಟಿಕೊಳ್ಳುತ್ತೀರಿ? ನ್ಯಾಯಾಂಗ ತನಿಖೆಯಿಂದ ಮಾತ್ರ ಅಮಾಯಕ ಜೀವಗಳಿಗೆ, ಅವರ ಹೆತ್ತವರಿಗೆ ನ್ಯಾಯ ಒದಗಿಸಲು ಸಾಧ್ಯ. ಸಾವಿನಲ್ಲೂ ನಿಮ್ಮ ಸಣ್ಣತನ ಪ್ರದರ್ಶನ ಮಾಡುವ ದುಸ್ಸಾಹಸ ಮಾಡಬೇಡಿ ಎಂದು ವಿಪಕ್ಷ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ನಿನ್ನೆ ಕಪ್ ಎತ್ತಿ ಫೋಟೋ ತೆಗೆಸಿಕೊಂಡು ಸಂಭ್ರಮ ಪಟ್ಟವರು ಇವತ್ತು ಸತ್ತ ಅಮಾಯಕರ ಶವಕ್ಕೆ ಹೆಗಲು ಕೊಡಲು ಬರುವುದಿಲ್ಲ.
— R. Ashoka (@RAshokaBJP) June 5, 2025
ನಿನ್ನೆ ವಿಮಾನ ನಿಲ್ದಾಣಕ್ಕೆ ಹೋಗಿ ಸೆಲ್ಫಿ ತೆಗೆಸಿಕೊಂಡು ಖುಷಿ ಪಟ್ಟವರು ಇವತ್ತು ಸತ್ತವರ ಮನೆಗೆ ಹೋಗಿ ಕಣ್ಣೀರು ಹಾಕುವುದಿಲ್ಲ.
ನಿನ್ನೆ ಕ್ರಿಕೆಟ್ ಆಟಗಾರರಿಗೆ ಪೇಟ ತೊಡಿಸಿ ಹಾರ ಹಾಕಿ ಸನ್ಮಾನ ಮಾಡಿದವರು ಇವತ್ತು… pic.twitter.com/WccOT0xmxG