ತೂಕ ನಷ್ಟಕ್ಕೆ ʼಕೀಟೋʼ ಆಹಾರ ಪದ್ಧತಿ ಅನುಸರಿಸುವವರು ಒಮ್ಮೆ ಓದಿ ಈ ಸುದ್ದಿ

ಸಾಮಾನ್ಯವಾಗಿ ಇತ್ತೀಚಿನ ದಿನಗಳಲ್ಲಿ ಹೆಚ್ಚಿನ ಜನರು ತೂಕ ಹೆಚ್ಚಳ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದು ಅವರ ದೇಹದ ಸೌಂದರ್ಯವನ್ನು ಹಾಳುಮಾಡುತ್ತಿದೆ. ಹಾಗಾಗಿ ಜನರು ತಮ್ಮ ದೇಹದ ತೂಕ ಇಳಿಸಿಕೊಳ್ಳಲು ಕೆಲವು ಆಹಾರ ಪದ್ಧತಿಗಳ ಮೊರೆ ಹೋಗುತ್ತಿದ್ದಾರೆ. ಅದರಲ್ಲಿ ಕೀಟೋ ಆಹಾರ ಪದ್ಧತಿ ಕೂಡ ಒಂದು. ಇದು ತೂಕ ನಷ್ಟಕ್ಕೆ ಸಹಕಾರಿಯಾಗಿದೆ. ಆದರೆ ಇದರಿಂದ ದೇಹದ ಆರೋಗ್ಯದ ಮೇಲೆ ಪರಿಣಾಮ ಬೀರುತ್ತದೆಯಂತೆ.

ಕೀಟೋ ಆಹಾರದಲ್ಲಿ ಕಡಿಮೆ ಪ್ರಮಾಣದಲ್ಲಿ ಕಾರ್ಬೋಹೈಡ್ರೇಟ್ ಗಳಿರುವ ಕಾರಣ ಇದು ಗ್ಲುಕೋಸ್ ಮಟ್ಟವನ್ನು ನಿಯಂತ್ರಿಸುತ್ತದೆ. ಇದರಿಂದ ಮಧುಮೇಹ ಸಮಸ್ಯೆ ಕಾಡುವುದಿಲ್ಲ. ಅಲ್ಲದೇ ಇದು ರಕ್ತದೊತ್ತಡವನ್ನು ನಿಯಂತ್ರಿಸುತ್ತದೆ. ಮತ್ತು ದೇಹದ ತೂಕವನ್ನು ನಿಯಂತ್ರಿಸುತ್ತದೆ.
ಆದರೆ ಈ ಆಹಾರದಲ್ಲಿ ಕೊಬ್ಬಿನಾಂಶ ಹೆಚ್ಚಾಗಿರುತ್ತದೆ.

ಇದರಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗುತ್ತದೆ. ಇದರಿಂದ ಹೃದ್ರೋಗದ ಅಪಾಯ ಕಾಡಬಹುದು ಎಂದು ತಜ್ಞರು ತಿಳಿಸಿದ್ದಾರೆ. ಅಲ್ಲದೇ ಇದರಲ್ಲಿ ಆಹಾರ ಸೇವನೆಗೆ ನಿರ್ಬಂಧ ಇರುವ ಕಾರಣ ದೇಹಕ್ಕೆ ಸರಿಯಾದ ಪೋಷಕಾಂಶ ಸಿಗದೆ ಆರೋಗ್ಯದ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆಯಂತೆ. ಹಾಗಾಗಿ ಕೀಟೋ ಆಹಾರ ಪದ್ಧತಿಯನ್ನು ಅನುಸರಿಸುವವರು ವೈದ್ಯರ ಸಲಹೆ ಪಡೆಯಿರಿ.

Share This Article

Latest News

ಬಸನಗೌಡ ಪಾಟೀಲ್ ಯತ್ನಾಳ್ ಉಚ್ಚಾಟನೆಯಿಂದ ಬಿಜೆಪಿಗೆ ಹಿನ್ನಡೆಯಾಗುತ್ತದಾ ?

View Results

Loading ... Loading ...

Most Read