HomeKarnatakaಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆ

ಅಕ್ರಮ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದವರೇ ಅರೆಸ್ಟ್: ಹೈಕೋರ್ಟ್ ತರಾಟೆ

ಬೆಂಗಳೂರು: ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಬಾಂಗ್ಲಾ ವಲಸಿಗರ ಬಗ್ಗೆ ಮಾಹಿತಿ ನೀಡಿದ್ದ ವ್ಯಕ್ತಿಯನ್ನೇ ಬಂಧಿಸಿದ್ದ ಬೆಳ್ಳಂದೂರು ಪೊಲೀಸರ ಕ್ರಮಕ್ಕೆ ಹೈಕೋರ್ಟ್ ಅಸಮಾಧಾನ ವ್ಯಕ್ತಪಡಿಸಿದೆ.

ಜುಲೈ 22ರಂದು ರಾತ್ರಿ 11:30ಕ್ಕೆ ಅಕ್ರಮ ಬಾಂಗ್ಲಾ ವಲಸಿಗರ ವಿರುದ್ಧ ಡಾ. ನಾಗೇಂದ್ರಪ್ಪ ಅವರಿಂದ ದೂರು ನೀಡಲಾಗಿತ್ತು. 11:45 ಕ್ಕೆ ದೂರು ನೀಡಿದ್ದ ನಾಗೇಂದ್ರಪ್ಪ ವಿರುದ್ಧವೇ ಕೇಸು ದಾಖಲಿಸಿ ಬಂಧಿಸಲಾಗಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗವಾಗಿದೆ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಹೈಕೋರ್ಟ್ ಪ್ರಶ್ನಿಸಿದೆ.

ಅಕ್ರಮ ವಲಸಿಗರನ್ನು ಸರ್ಕಾರ ಪೊಲೀಸರೇ ಬೆಂಬಲಿಸುತ್ತಿದ್ದಾರೆ. ಬೆಂಗಳೂರಿನ ನಿವಾಸಿಗಳಿಗಿಂತ ವಲಸಿಗರೇ ಮುಖ್ಯವಾಗಿದ್ದಾರಾ ಎಂದು ಹೈಕೋರ್ಟ್ ಪ್ರಶ್ನಿಸಿದೆ. ದೇಶದ ಭದ್ರತೆಗೆ ಬೆದರಿಕೆ ಇದ್ದರೂ ವಲಸಿಗರನ್ನು ಬೆಂಬಲಿಸುತ್ತಿದ್ದೀರಾ? ವಲಸಿಗರನ್ನು ಹೊರಗೆ ಕಳುಹಿಸಿ ಎಂದರೆ ದೂರು ನೀಡಿದವರ ಮೇಲೆ ಕೇಸು ದಾಖಲಿಸಿದ್ದೀರಿ ಅಕ್ರಮ ವಲಸಿಗರ ಓಲೈಕೆ ನಿಲ್ಲಬೇಕು ಎಂದು ಹೈಕೋರ್ಟ್ ಹೇಳಿದೆ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ ಅಸಮಾಧಾನ ವ್ಯಕ್ತಪಡಿಸಿದೆ. ಅಕ್ರಮ ವಲಸಿಗರ ಗಡಿಪಾರಿಗೆ ಕ್ರಮ ಕೈಗೊಳ್ಳುವಂತೆ ಹೈಕೋರ್ಟ್ ಸೂಚನೆ ನೀಡಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಾಂಗ್ಲಾ ಮೂಲದ ನಜ್ರೀನಾ ವಿರುದ್ಧ ನೀಡಿದ್ದ ದೂರಿನ ಮೇರೆಗೆ ಪೊಲೀಸರು ಬಂಧಿಸಿದ್ದರು. ಪೊಲೀಸರ ಕ್ರಮದ ಬಗ್ಗೆ ಆಗಸ್ಟ್ 6 ಒಳಗೆ ವಿವರಣೆ ನೀಡಲು ಸೂಚಿಸಲಾಗಿದೆ. ಅರ್ಜಿದಾರರ ಪರ ವಕೀಲ ಗಿರೀಶ್ ಭಾರದ್ವಾಜ್ ವಾದ ಮಂಡಿಸಿದ್ದಾರೆ. ಅರ್ಜಿದಾರರ ವಿರುದ್ಧದ ಪ್ರಕರಣಕ್ಕೆ ಹೈಕೋರ್ಟ್ ತಡೆಯಾಜ್ಞೆ ನೀಡಿದೆ.

ಪ್ರಕರಣ ರದ್ದುಕೋರಿ ನಾಗೇಂದ್ರ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರಿದ್ದ ಹೈಕೋರ್ಟ್ ಪೀಠ, ಬೆಳ್ಳಂದೂರು ಪೊಲೀಸರ ಈ ನಡೆಗೆ ಅಸಮಾಧಾನಗೊಂಡಿದೆ. ಇದು ಕಾನೂನು ಪ್ರಕ್ರಿಯೆಯ ಸಂಪೂರ್ಣ ದುರುಪಯೋಗ. ಗೃಹ ಇಲಾಖೆ ಏನು ಮಾಡುತ್ತಿದೆ ಎಂದು ಪ್ರಶ್ನೆಸಿ ಅರ್ಜಿದಾರರ ವಿರುದ್ಧದ ಕೇಸ್​ಗೆ ತಡೆಯಾಜ್ಞೆ ನೀಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

LEAVE A REPLY

Please enter your comment!
Please enter your name here

Most Popular