HomeKarnatakaBIG NEWS : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಒಳಗಾದವರು ಪೊಲೀಸರಿಗೆ ದೂರು ನೀಡಿ : ಸಿಎಂ...

BIG NEWS : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಒಳಗಾದವರು ಪೊಲೀಸರಿಗೆ ದೂರು ನೀಡಿ : ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು : ‘ಮೈಕ್ರೋ ಫೈನಾನ್ಸ್’ ಕಿರುಕುಳಕ್ಕೆ ಒಳಗಾದವರು ಪೊಲೀಸರಿಗೆ ದೂರು ನೀಡಿ ಎಂದು ಸಿಎಂ ಸಿದ್ದರಾಮಯ್ಯ ಸೂಚನೆ ನೀಡಿದ್ದಾರೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿರುವ ಸಿಎಂ ಸಿದ್ದರಾಮಯ್ಯ ‘’ಮೈಕ್ರೋ ಫೈನಾನ್ಸ್ ಕಂಪೆನಿಗಳು ಅಥವಾ ಇತರೆ ಖಾಸಗಿ ಹಣಕಾಸು ಸಂಸ್ಥೆಗಳು / ವ್ಯಕ್ತಿಗಳು ಸಾಲ ವಸೂಲಿಯ ನೆಪದಲ್ಲಿ ನೀಡುತ್ತಿದ್ದ ಕಿರುಕುಳ, ಮಾನಸಿಕ ಹಿಂಸೆ ಮತ್ತು ದೌರ್ಜನ್ಯದಂತಹ ಅಮಾನವೀಯ, ಕಾನೂನು ಬಾಹಿರ ಕ್ರಮಗಳ ಮೇಲೆ ನಿಯಂತ್ರಣ ಹಾಗೂ ನಿರ್ಬಂಧ ಹೇರುವ ಉದ್ದೇಶದಿಂದ ನಾವು ರೂಪಿಸಿದ “ಕರ್ನಾಟಕ ಕಿರು ಸಾಲ ಮತ್ತು ಸಣ್ಣ ಸಾಲ ( ಬಲವಂತದ ಕ್ರಮಗಳ ಪ್ರತಿಬಂಧಕ ) ಅಧ್ಯಾದೇಶ – 2025” ಈ ಕ್ಷಣದಿಂದ ಕಾನೂನಾಗಿ ಜಾರಿಗೆ ಬಂದಿದೆ. ಮೈಕ್ರೋ ಫೈನಾನ್ಸ್ನಲ್ಲಿ ಸಾಲ ಪಡೆದು ಕಿರುಕುಳಕ್ಕೆ ಒಳಗಾದವರು ಪೊಲೀಸರ ಬಳಿ ದೂರು ದಾಖಲಿಸಬಹುದು, ಅಂಥವರಿಗೆ ಹೊಸ ಕಾನೂನಿನಡಿ ಹೆಚ್ಚಿನ ರಕ್ಷಣೆ ದೊರೆಯಲಿದೆ. ನಮ್ಮ ಈ ಪ್ರಯತ್ನದಿಂದ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್, ಫೈನಾನ್ಸ್ ಹಾಗೂ ಲೇವಾದೇವಿದಾರರ ಕಿರುಕುಳ, ದೌರ್ಜನ್ಯಗಳು ಕೊನೆಯಾಗಲಿದೆ’’ ಎಂಬ ಭರವಸೆ ನನಗಿದೆ ಎಂದು ಸಿಎಂ ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ.

 

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular