ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ನಟಿ ಹಾಗೂ ಮಾಜಿ ಸಂಸದೆ ರಮ್ಯಾ ಅವರಿಗೆ ಅಶ್ಲೀಲ ಸಂದೇಶ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಂಗಳೂರಿನ 46ನೇ ಸಿಸಿಹೆಚ್ ನ್ಯಾಯಾಲಯದಲ್ಲಿ ಸಾಕ್ಷ್ಯ ವಿಚಾರಣೆ ನಡೆಸಲಾಗಿದೆ.
ಸಾಕ್ಷ್ಯ ವಿಚಾರಣೆಯ ಬಳಿಕ ನಟಿ ರಮ್ಯಾ ಪ್ರತಿಕ್ರಿಯೆ ನೀಡಿದ್ದು, ಎವಿಡೆನ್ಸ್ ಕೊಡಬೇಕಿತ್ತು, ಅದಕ್ಕೆ ಬಂದಿದ್ದೆ. ಆರೋಪಿಗಳನ್ನು ನೋಡಿದರೆ ಬೇಸರ ಆಗುತ್ತದೆ, ನನ್ನ ಉದ್ದೇಶ ಅದಲ್ಲ, ಹೆಣ್ಣು ಮಕ್ಕಳ ವಿಚಾರದಲ್ಲಿ ಒಳ್ಳೆಯ ರೀತಿಯಾಗಿ ನಡೆದುಕೊಳ್ಳಬೇಕು. ಹೆಣ್ಣು ಮಕ್ಕಳಿಗೆ ಬೆದರಿಕೆ ಹಾಕುವವರಿಗೆ ಭಯ ಬರಬೇಕು. ಆ ಕಾರಣಕ್ಕೆ ಈ ತೀರ್ಮಾನ ಮಾಡಿದ್ದೇವೆ. ಎಲ್ಲಾ ಹೆಣ್ಣುಮಕ್ಕಳ ಪರವಾಗಿ ಈ ಕೇಸ್ ಮುಂದುವರೆಸುತ್ತಿದ್ದೇನೆ ಎಂದು ಹೇಳಿದ್ದಾರೆ.

