ಬೆಂಗಳೂರು : ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಪೋಟಕ ಇಟ್ಟಿದ್ದ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತರನ್ನು ಕೋಲಾರ ಮೂಲದ ಗಣೇಶ್, ಮುನಿರಾಜ್, ಶಿವಕುಮಾರ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಸ್ಫೋಟಕಗಳು ಪತ್ತೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರು ಆರು ತಂಡ ರಚನೆ ಮಾಡಿದ್ದರು.. ಬೆಂಗಳೂರಿನ ಕಲಾಸಿಪಾಳ್ಯ ಬಸ್ ನಿಲ್ದಾಣದಲ್ಲಿ ಜುಲೈ 23ರಂದು ಬ್ಯಾಗ್ ವೊಂದರಲ್ಲಿ ಸ್ಫೋಟಕಗಳು ಪತ್ತೆಯಾಗಿದ್ದವು. ಜಿಲೆಟಿನ್ ಕಡ್ಡಿಗಳು, ಡಿಟೋನೇಟರ್ ಗಳು ಪತ್ತೆಯಾಗಿದ್ದು ಕಲಾಸಿಪಾಳ್ಯ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆಗೆ ಪೊಲೀಸರು ಆರು ತಂಡ ರಚನೆ ಮಾಡಿದ್ದರು..ಇದೀಗ ಕಾರ್ಯಾಚರಣೆ ನಡೆಸಿದ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.