HomeKarnataka10 ತಿಂಗಳಿನಿಂದ ಇದ್ದ 3 ಕರಡಿಗಳು ಯಶಸ್ವಿಯಾಗಿ ಸೆರೆ

10 ತಿಂಗಳಿನಿಂದ ಇದ್ದ 3 ಕರಡಿಗಳು ಯಶಸ್ವಿಯಾಗಿ ಸೆರೆ

ಬಳ್ಳಾರಿ ಜಿಲ್ಲೆ ಸಂಡೂರು ತಾಲೂಕಿನ ತೋರಣಗಲ್ಲಿನ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್ ವ್ಯಾಪ್ತಿಯಲ್ಲಿ ಕಳೆದ 10 ತಿಂಗಳಿನಿಂದ ಬೀಡುಬಿಟ್ಟಿದ್ದ ತಾಯಿ ಕರಡಿ ಹಾಗೂ ಎರಡು ಮರಿಗಳನ್ನು ಅರಣ್ಯ ಇಲಾಖೆ ಅಧಿಕಾರಿಗಳು ಗುರುವಾರ ಯಶಸ್ವಿಯಾಗಿ ಸೆರೆಹಿಡಿದಿದ್ದಾರೆ.

ಈ ಕಾರ್ಯಾಚರಣೆಯಲ್ಲಿ ಮೊದಲ ಬಾರಿಗೆ ಅತ್ಯಾಧುನಿಕ ಆಟೋಮ್ಯಾಟಿಕ್ ಮೊಬೈಲ್ ಆಪ್ ಆಧಾರಿತ ಕೇಜ್ ಲಾಕಿಂಗ್ ಸಿಸ್ಟಮ್ ಬಳಸುವ ಮೂಲಕ ಮೂರೂ ಕರಡಿಗಳನ್ನು ಏಕಕಾಲಕ್ಕೆ ಬಂಧಿಸಿರುವುದು ವಿಶೇಷವಾಗಿದೆ.

ಕಳೆದ ಸುಮಾರು 10 ತಿಂಗಳಿನಿಂದ ಈ ಕರಡಿಗಳ ಕುಟುಂಬ ಜಿಂದಾಲ್ ವಿದ್ಯಾನಗರ ಟೌನ್‌ಶಿಪ್‌ನಲ್ಲಿ ಕಾಣಿಸಿಕೊಳ್ಳುತ್ತಿತ್ತು. ಇದರಿಂದ ನಿವಾಸಿಗಳಲ್ಲಿ ಭೀತಿ ಉಂಟಾಗಿದ್ದರೂ, ಅರಣ್ಯ ಇಲಾಖೆಯ ಮುನ್ನೆಚ್ಚರಿಕೆಯಿಂದಾಗಿ ಯಾವುದೇ ಅಹಿತಕರ ಘಟನೆ ಸಂಭವಿಸಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ವನ್ಯಜೀವಿ ವಿಭಾಗದ ಪಿಸಿಸಿಎಫ್ ಅವರ ಆದೇಶದನ್ವಯ, ಬಳ್ಳಾರಿ ಡಿಸಿಎಫ್ ಕೆ.ಎನ್.ಬಸವರಾಜ್ ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆಸಲಾಯಿತು.

ಎಸಿಎಫ್ ಶರಣ್ ಕುಮಾರ್, ಆರ್‌ಎಫ್‌ಒಗಳಾದ ಸಯ್ಯದ್ ದಾದಾ ಖಲಂದರ್ ಮತ್ತು ಮಂಜುನಾಥ್, ಡಿಆರ್‌ಎಫ್‌ಒಗಳಾದ ಮೋಹನ್ ಹಾಗೂ ಗುರುಸ್ವಾಮಿ, ಬಿಎಫ್‌ಒಗಳಾದ ವೆಂಕಟೇಶ್ ಮತ್ತು ಶ್ರೀಧರ್ ಅವರ ತಂಡ ಈ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿತ್ತು.

ಸೆರೆಹಿಡಿದ ತಾಯಿ ಕರಡಿಗೆ ಮುಂದಿನ ದಿನಗಳಲ್ಲಿ ಅದರ ಚಲನವಲನದ ಮೇಲೆ ನಿಗಾ ಇಡಲು ರೇಡಿಯೋ ಕಾಲರ್ ಅಳವಡಿಸಲಾಗಿದೆ. ನಂತರ ಮೇಲಾಧಿಕಾರಿಗಳ ಸೂಚನೆಯಂತೆ, ಸುರಕ್ಷಿತ ಅರಣ್ಯ ಪ್ರದೇಶದಲ್ಲಿ ತಾಯಿ ಹಾಗೂ ಮರಿಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಬಳ್ಳಾರಿ ವಲಯ ಉಪ ಅರಣ್ಯ ಸಂರಕ್ಷಣಾಧಿಕಾರಿ ಕೆ.ಎನ್.ಬಸವರಾಜ್ ತಿಳಿಸಿದ್ದಾರೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

LEAVE A REPLY

Please enter your comment!
Please enter your name here

Most Popular