HomeLatest Newsಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಮೂರು ಕರಡಿ ದಾಳಿ, ಎದೆಗುಂದದೆ ಹೋರಾಡಿ ಪಾರಾದ ಮಹಿಳೆ

ಬಹಿರ್ದೆಸೆಗೆ ಹೋಗಿದ್ದ ಮಹಿಳೆ ಮೇಲೆ ಮೂರು ಕರಡಿ ದಾಳಿ, ಎದೆಗುಂದದೆ ಹೋರಾಡಿ ಪಾರಾದ ಮಹಿಳೆ

ದಾವಣಗೆರೆ: ಬಹಿರ್ದೆಸೆಗೆ ತೆರಳಿದ್ದ ಒಂಟಿ ಮಹಿಳೆ ಮೇಲೆ ಕರಡಿಯೊಂದು ತನ್ನ ಎರಡು ಮರಿಗಳ ಜೊತೆ ದಿಢೀರ್ ದಾಳಿ ಮಾಡಿದೆ. ಈ ವೇಳೆ ಎದೆಗುಂದದೆ ಹೋರಾಡಿದ ಮಹಿಳೆ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಜಗಳೂರು ತಾಲೂಕಿನ ಗೋಪಗೊಂಡನಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದೆ. ರಾಜನಹಳ್ಳಿ ಗ್ರಾಮದ ನೇತ್ರಾವತಿ ಕರಡಿಯೊಂದಿಗೆ ಹೋರಾಡಿ ಪ್ರಾಣ ಉಳಿಸಿಕೊಂಡ ಧೀರ ಮಹಿಳೆಯಾಗಿದ್ದಾರೆ. ಕೋಳಿ ಫಾರಂನಲ್ಲಿ ಕೆಲಸ ಮಾಡುತ್ತಿರುವ ಅವರು ಪತಿ, ಮಕ್ಕಳೊಂದಿಗೆ ಅಲ್ಲೇ ವಾಸವಾಗಿದ್ದಾರೆ.

ಕೋಳಿ ಫಾರಂ ಸುತ್ತಲಿನ ಭಾಗದಲ್ಲಿ ದಟ್ಟ ಅರಣ್ಯ ಇದ್ದು, ಅರಣ್ಯದ ದಾರಿಯಲ್ಲಿ ಬಹಿರ್ದೆಸೆಗೆ ಹೋಗುತ್ತಿದ್ದಾಗ ಎರಡು ಮರಿಗಳಿದ್ದ ತಾಯಿ ಕರಡಿ ಏಕಾಏಕಿ ದಾಳಿ ಮಾಡಿದೆ. ರಕ್ಷಣೆಗಾಗಿ ಅವರು ಕೂಗಾಡಿದ್ದು ಯಾರೂ ಬಂದಿಲ್ಲ. ಎದೆಗುಂದದೆ ಹೋರಾಡಿದ ನೇತ್ರಾವತಿ ದೊಡ್ಡ ಕರಡಿಯನ್ನು ಹಿಮ್ಮೆಟ್ಟಿಸಲು ಪ್ರಯತ್ನಿಸಿದ್ದಾರೆ. ಆದರೂ ಕರಡಿ ನೇತ್ರಾವತಿಯವರನ್ನು ಗಾಯ ಮಾಡಿದೆ. ಈ ವೇಳೆ ದೊಡ್ಡ ಮರವೊಂದರ ಪೊದೆಯಲ್ಲಿ ರಕ್ಷಣೆ ಪಡೆಯಲು ಯತ್ನಿಸಿ ಓಡುವಾಗ ಗುಂಡಿಯಲ್ಲಿ ಬಿದ್ದಿದ್ದಾರೆ. ಧೃತಿಗೆಡದೆ ಅರಣ್ಯ ಪ್ರದೇಶದಿಂದ ರಸ್ತೆ ತಲುಪಿದ ಅವರು ಬದುಕುಳಿದಿದ್ದಾರೆ. ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular