HomeIndiaನಕಲಿ ಮದ್ಯ ಸೇವಿಸಿ ಮೂವರು ಸಾವು

ನಕಲಿ ಮದ್ಯ ಸೇವಿಸಿ ಮೂವರು ಸಾವು

ವಿಲುಪ್ಪುರಂ(ತಮಿಳುನಾಡು): ತಮಿಳುನಾಡಿನ ವಿಲುಪ್ಪುರಂನ ಮರಕ್ಕನಂನಲ್ಲಿ ನಕಲಿ ಮದ್ಯ ಸೇವಿಸಿದ ಮೂವರು ಸಾವನ್ನಪ್ಪಿದ್ದಾರೆ. 16 ಜನರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ.

ಮರಕ್ಕನಂನ ಎಕ್ಕಿಯಾರ್ಕುಪ್ಪಂ ಮೀನುಗಾರಿಕಾ ಕುಗ್ರಾಮದಲ್ಲಿ ಶನಿವಾರ ಸಂಜೆ ಜನರ ಗುಂಪೊಂದು ಅಕ್ರಮ ಮದ್ಯ ಸೇವಿಸಿದ ದುರಂತ ಸಂಭವಿಸಿದೆ. ದುರಂತದಲ್ಲಿ ಮೃತಪಟ್ಟವರನ್ನು ಶಂಕರ್ (50), ದರಣಿವೇಲ್ (50) ಮತ್ತು ಸುರೇಶ್ (60) ಎಂದು ಗುರುತಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅವರು ಮತ್ತು ಮದ್ಯ ಸೇವಿಸಿದ ಇತರರು ದೈಹಿಕ ಅಸ್ವಸ್ಥತೆಯನ್ನು ಅನುಭವಿಸಿದ ನಂತರ ಪುದುಚೇರಿಯ ಜಿಪ್ಮರ್ ಆಸ್ಪತ್ರೆಗೆ ಸಾಗಿಸಲಾಯಿತು. ನಕಲಿ ಮದ್ಯ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ. ಇತರ ಆರೋಪಿಗಳನ್ನು ಸೆರೆಹಿಡಿಯಲು ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಮೃತರ ಕುಟುಂಬಕ್ಕೆ 10 ಲಕ್ಷ ರೂಪಾಯಿ ಮತ್ತು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವವರಿಗೆ 50,000 ರೂಪಾಯಿಗಳನ್ನು ನೀಡುವುದಾಗಿ ಘೋಷಿಸಿದರು.

ಘಟನೆಗೆ ಸಂಬಂಧಿಸಿದಂತೆ ಮರಕ್ಕನಂ ಇನ್ಸ್‌ ಪೆಕ್ಟರ್ ಅರುಳ್ ವಡಿವೇಲ್ ಅಳಗನ್, ಸಬ್ ಇನ್‌ಸ್ಪೆಕ್ಟರ್ ದೀಪನ್, ಪಿಯು ಇನ್ಸ್‌ ಪೆಕ್ಟರ್ ಮರಿಯಾ ಸೋಬಿ ಮಂಜುಳಾ ಮತ್ತು ಸಬ್ ಇನ್‌ಸ್ಪೆಕ್ಟರ್ ಶಿವಗುರುನಾಥನ್ ಅವರನ್ನು ತಾತ್ಕಾಲಿಕವಾಗಿ ಅಮಾನತುಗೊಳಿಸಲಾಗಿದೆ ಎಂದು ಮುಖ್ಯಮಂತ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular