HomeLatest NewsBREAKING: ದಕ್ಷಿಣ ಜರ್ಮನಿಯಲ್ಲಿ ಹಳಿತಪ್ಪಿದ ಪ್ರಯಾಣಿಕ ರೈಲು: ಮೂವರು ಸಾವು

BREAKING: ದಕ್ಷಿಣ ಜರ್ಮನಿಯಲ್ಲಿ ಹಳಿತಪ್ಪಿದ ಪ್ರಯಾಣಿಕ ರೈಲು: ಮೂವರು ಸಾವು

ಬರ್ಲಿನ್: ದಕ್ಷಿಣ ಜರ್ಮನಿಯಲ್ಲಿ ಪ್ರಯಾಣಿಕ ರೈಲು ಹಳಿತಪ್ಪಿ ಕನಿಷ್ಠ ಮೂವರು ಸಾವನ್ನಪ್ಪಿದ್ದು, ಹಲವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

 ಮ್ಯೂನಿಚ್‌ನಿಂದ ಪಶ್ಚಿಮಕ್ಕೆ ಸುಮಾರು 158 ಕಿಲೋಮೀಟರ್ ದೂರದಲ್ಲಿರುವ ರೀಡ್ಲಿಂಗೆನ್ ಬಳಿ ಅಪಘಾತ ನಡೆದಿದೆ. ತನಿಖೆ ನಡೆಸಲಾಗಿದೆ ಎಂದು ಫೆಡರಲ್ ಮತ್ತು ಸ್ಥಳೀಯ ಪೊಲೀಸರು ತಿಳಿಸಿದ್ದಾರೆ.

ಜರ್ಮನ್ ಚಾನ್ಸೆಲರ್ ಫ್ರೆಡ್ರಿಕ್ ಮೆರ್ಜ್ ಅವರು ದುರಂತದ ಬಗ್ಗೆ ಶೋಕ ವ್ಯಕ್ತಪಡಿಸಿದ್ದಾರೆ ಮತ್ತು ಮೃತರ ಕುಟುಂಬಗಳಿಗೆ ಸಂತಾಪ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅರಣ್ಯ ಪ್ರದೇಶದಲ್ಲಿ ಕನಿಷ್ಠ ಎರಡು ಬೋಗಿಗಳು ಹಳಿತಪ್ಪಿದಾಗ ರೈಲಿನಲ್ಲಿ ಸುಮಾರು 100 ಜನ ಇದ್ದರು. ಅಪಘಾತದ ಮೊದಲು ಆ ಪ್ರದೇಶದಲ್ಲಿ ಭಾರೀ ಬಿರುಗಾಳಿ ಹಾದುಹೋಗಿದೆ. ಜರ್ಮನಿಯ ಪ್ರಮುಖ ರಾಷ್ಟ್ರೀಯ ರೈಲ್ವೆ ನಿರ್ವಾಹಕ ಡಾಯ್ಚ ಬಾನ್ ಪರಿಶೀಲಿಸಿದ್ದು, ತನಿಖಾಧಿಕಾರಿಗಳೊಂದಿಗೆ ಸಹಕರಿಸುವುದಾಗಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular