ಕಟಕ್ : ಒಡಿಶಾದ ಕಟಕ್ ನ ಖಾನ್ ನಗರ ಪ್ರದೇಶದಲ್ಲಿ ನಿರ್ಮಾಣ ಹಂತದಲ್ಲಿದ್ದ ಸೇತುವೆಯ ಸ್ಲ್ಯಾಬ್ ಕುಸಿದು ಕನಿಷ್ಠ ಮೂವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಮತ್ತು ಇಬ್ಬರು ತೀವ್ರವಾಗಿ ಗಾಯಗೊಂಡಿದ್ದಾರೆ.
ಖಾನ್ನಗರದಲ್ಲಿ ನಿರ್ಮಾಣ ಕಾರ್ಯ ನಡೆಯುತ್ತಿದ್ದಾಗ ಸಂಜೆ 6 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ. ಐದು ಜನರಿಗೆ ಗಂಭೀರ ಗಾಯಗಳಾಗಿದ್ದು, ತಕ್ಷಣ ಅವರನ್ನು ಎಸ್ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಸಾಗಿಸಲಾಗಿದ್ದು, ಅವರಲ್ಲಿ ಮೂವರು ಚಿಕಿತ್ಸೆಯ ಸಮಯದಲ್ಲಿ ಸಾವನ್ನಪ್ಪಿದ್ದಾರೆ.
ಮೂವರು ವ್ಯಕ್ತಿಗಳ ಸಾವನ್ನು ಎಸ್ಸಿಬಿ ಆಸ್ಪತ್ರೆಯ ಅಧಿಕಾರಿಗಳು ದೃಢಪಡಿಸಿದ್ದಾರೆ. ಮಾಹಿತಿ ಪಡೆದ ಹಿರಿಯ ಪೊಲೀಸ್ ಅಧಿಕಾರಿಗಳು, ಅಗ್ನಿಶಾಮಕ ಸಿಬ್ಬಂದಿ ಮತ್ತು ಜಿಲ್ಲಾ ಆಡಳಿತ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಪರಿಸ್ಥಿತಿಯನ್ನು ಅವಲೋಕಿಸಿದರು.
You Might Also Like
TAGGED:ಒಡಿಶಾ