HomeIndiaರಾಮನವಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರ ಸಾವು, 6 ಮಂದಿಗೆ ಗಾಯ

ರಾಮನವಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರ ಸಾವು, 6 ಮಂದಿಗೆ ಗಾಯ

ರಾಜಸ್ಥಾನದ ಕೋಟಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆ ವೇಳೆ ವಿದ್ಯುತ್ ತಂತಿ ಸ್ಪರ್ಶಿಸಿ ಮೂವರು ಭಕ್ತರು ಸಾವನ್ನಪ್ಪಿರುವ ಆಘಾತಕಾರಿ ಘಟನೆ ವರದಿಯಾಗಿದೆ. ಘಟನೆಯಲ್ಲಿ ಕನಿಷ್ಠ 6 ಮಂದಿ ತೀವ್ರ ಸುಟ್ಟ ಗಾಯಗಳಿಂದ ಬಳಲುತ್ತಿದ್ದಾರೆ. ಘಟನೆಯಲ್ಲಿ ಗಾಯಗೊಂಡವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಕೋಟಾದ ಸುಲ್ತಾನ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ರಾ ದೀಪ್‌ಸಿಂಗ್ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಗುರುವಾರ ರಾಮನವಮಿ ಮೆರವಣಿಗೆ ಹೊರಡುವಾಗ ಮೂವರು ವ್ಯಕ್ತಿಗಳು ವಿದ್ಯುತ್ ತಂತಿ ಸ್ಪರ್ಶಿಸಿದ್ದಾರೆ. ಮೃತರನ್ನು ಲಲಿತ್, ಅಭಿಷೇಕ್ ಮತ್ತು ಮಹೇಂದ್ರ ಎಂದು ಗುರುತಿಸಲಾಗಿದೆ.

ಇಡೀ ಘಟನೆ ಕ್ಯಾಮರಾದಲ್ಲಿ ಸೆರೆಯಾಗಿದ್ದು ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಘಟನೆಯ ನಂತರ ಎಲ್ಲಾ ಗಾಯಾಳುಗಳನ್ನು ಸುಲ್ತಾನ್‌ಪುರ ಆಸ್ಪತ್ರೆಗೆ ರವಾನಿಸಲಾಗಿದೆ. ಮೂವರ ಸ್ಥಿತಿ ಚಿಂತಾಜನಕವಾಗಿದ್ದು ಅವರನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular