ಬೆಂಗಳೂರು : ಲವರ್ಸ್ ಜೊತೆ ಮೋಜು-ಮಸ್ತಿ ಮಾಡಲು ಕಳ್ಳತನ ಮಾಡಿದ ಆರೋಪದ ಮೇರೆಗೆ ಬೆಂಗಳೂರಲ್ಲಿ ಮೂವರು ಪದವಿ ವಿದ್ಯಾರ್ಥಿಗಳು ಅರೆಸ್ಟ್ ಆಗಿದ್ದಾರೆ.
ಕೊತ್ತನೂರು ಠಾಣೆ ಪೊಲೀಸರು ಮೂವರು ವಿದ್ಯಾರ್ಥಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ. ಬಂಧಿತರನ್ನು ಬಿಕಾಂ ವ್ಯಾಸಂಗ ಮಾಡುತ್ತಿದ್ದ ಯಶವಂತ್, ರಮೇಶ್, ತನುಷ್ ಎಂದು ಗುರುತಿಸಲಾಗಿದೆ.
ಬೆಂಗಳೂರಿನ ಖಾಸಗಿ ಕಾಲೇಜಿನಲ್ಲಿ ಬಿಕಾಂ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಮೋಜು ಮಸ್ತಿ ಮಾಡಲು ಅಡ್ಡದಾರಿ ಹಿಡಿದಿದ್ದಾರೆ. ಪ್ರೀತಿ ಪ್ರೇಮದ ಗುಂಗಿನಲ್ಲಿ ಬಿದ್ದಿದ್ದ ವಿದ್ಯಾರ್ಥಿಗಳು ಖರ್ಚು ಮಾಡಲು ಹಣ ಇಲ್ಲದೇ ಹೋದಾಗ ಮನೆ ಕಳ್ಳತನ ಮಾಡಲು ಶುರು ಮಾಡಿದ್ದಾರೆ. ಶ್ರೀನಿವಾಸ್ ಎಂಬುವವರ ಮನೆಯಲ್ಲಿ ಕಳ್ಳತನ ಮಾಡಿದ ವಿದ್ಯಾರ್ಥಿಗಳು ನಂತರ ಲವರ್ಸ್ ಜೊತೆ ಗೋವಾಗೆ ಹೋಗಿದ್ದಾರೆ. ಗೋವಾದಿಂದ ಬರುತ್ತಿದ್ದಂತೆ ಪೊಲೀಸರು ಮೂವರನ್ನು ಬಂಧಿಸಿದ್ದಾರೆ. ಬಂಧಿತರಿಂದ 10 ಲಕ್ಷ ರೂ ಹಣ ಹಾಗೂ ಚಿನ್ನಾಭರಣ ಜಪ್ತಿ ಮಾಡಲಾಗಿದೆ.