HomeKarnatakaದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ ಜಿಲ್ಲಾಸ್ಪತ್ರೆಯಲ್ಲಿ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಮೂವರಿಗೆ ಗಾಯ

ದಾವಣಗೆರೆ: ದಾವಣೆಗರೆ ಜಿಲ್ಲಾ ಆಸ್ಪತ್ರೆಯ ಮೇಲ್ಚಾವಣಿ ಕಾಂಕ್ರಿಟ್ ಗಾರೆ ಪದರು ಕುಸಿದು ಎರಡು ವರ್ಷದ ಮಗು ಸೇರಿ ಮೂವರು ಗಾಯಗೊಂಡಿದ್ದಾರೆ.

ಜಿಲ್ಲಾಸ್ಪತ್ರೆ ಹಿಂಭಾಗದ ತುರ್ತು ಚಿಕಿತ್ಸಾ ಘಟಕ ಎದುರಿನ ಮುಖ್ಯ ಕಟ್ಟಡದಲ್ಲಿರುವ ಮೇಲ್ಚಾವಣಿಯ ಕಾಂಕ್ರೀಟ್ ಪದರು ಕಳಚಿ ಬಿದ್ದಿದೆ. ಘಟನೆಯಲ್ಲಿ ವಿಜಯನಗರ ಜಿಲ್ಲೆ ಹಲವಾಗಲು ನಿವಾಸಿಗಳಾದ ಪ್ರೇಮಕ್ಕ(46), ಕಾವೇರಿ(36) ನೇತ್ರಾ(2) ಗಾಯಗೊಂಡಿದ್ದಾರೆ.

ಮಗುವಿನ ತಲೆಗೆ ಮತ್ತು ಮಹಿಳೆಯರಿಬ್ಬರ ಕೈ, ಬೆನ್ನಿಗೆ ಪೆಟ್ಟಾಗಿದ್ದು, ಚಿಕಿತ್ಸೆ ನೀಡಲಾಗಿದೆ. ಗಾಯಾಳುಗಳು ಆಸ್ಪತ್ರೆಗೆ ದಾಖಲಾಗಿದ್ದ ತಾಯಿಯ ಆರೋಗ್ಯ ವಿಚಾರಿಸಲು ಬಂದಿದ್ದ ವೇಳೆಯೇ ಘಟನೆ ನಡೆದಿದೆ. ಹಿರಿಯ ವೈದ್ಯಾಧಿಕಾರಿಗಳು ಪರಿಶೀಲನೆ ನಡೆಸಿದ್ದು, ಕ್ರಮಕ್ಕೆ ಸೂಚಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular